ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 20 JANUARY 2024
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ (Kuvempu University) 34ನೇ ಘಟಿಕೋತ್ಸವ ಜ.22ರಂದು ಶಂಕರಘಟ್ಟದಲ್ಲಿ ನಡೆಯಲಿದೆ. ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಅವಕಾಶ ಇರಲಿದೆ. ಈ ಬಾರಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು.
ಯಾರಿಗೆಲ್ಲ ಗೌರವ ಡಾಕ್ಟರೇಟ್?
ಹಿರಿಯ ರಾಜಕಾರಣಿ ಮತ್ತು ಸಮಾಜ ಸೇವಕ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
ಕಾಗೋಡು ತಿಮ್ಮಪ್ಪ ಅವರಿಗೆ ಈ ಮೊದಲೆ ಗೌರವ ಡಾಕ್ಟರೇಟ್ ಲಭಿಸಬೇಕಿತ್ತು. ಆದರೆ ಈಗ ಅವರ ಹೆಸರು ಆಯ್ಕೆ ಸಮಿತಿ ಮುಂದೆ ಬಂದಿದೆ. ಕಾಲೇಜು ಒಂದರ ಪ್ರಾಂಶುಪಾಲರು ಕಾಗೋಡು ತಿಮ್ಮಪ್ಪ ಅವರ ಹೆಸರು ಪ್ರಸ್ತಾಪಿಸಿದ್ದರು.
– ಪ್ರೊ.ಶರತ್ ಅನಂತಮೂರ್ತಿ, ಕುಲಪತಿ
![]()

» ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರೊ. ಸಿ.ಎಸ್.ಉನ್ನೀಕೃಷ್ಣನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಮೂಲಭೂತ ವಿಜ್ಞಾನದಲ್ಲಿ ಸಂಶೋಧನೆ ಮತ್ತು ಸಾಧನೆ ಮಾಡಿದ್ದಾರೆ.

» ಭದ್ರಾವತಿಯ ಯೋಗ ಗುರು ಡಿ.ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. 33ಕ್ಕಿಂತಲು ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಉಚಿತವಾಗಿ ಶಿಬಿರ ಮಾಡಿ, ಯೋಗ ಪ್ರಚಾರ ಮಾಡುತ್ತಿದ್ದಾರೆ.
ಕುಲಸಚಿವ ಎ.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವ ಪ್ರೊ. ಎಸ್.ಎಂ.ಗೋಪಿನಾಥ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಸತ್ಯಪ್ರಕಾಶ್ ಸುದ್ದಿಗೋಷ್ಠಿಯಲ್ಲಿದ್ದರು.
Kuvempu University
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





