ಕುವೆಂಪು ವಿವಿಯಲ್ಲಿ ಚಿನ್ನದ ಪದಕ, ನಗದು ಬಹುಮಾನದ ಬೇಟೆಯಲ್ಲಿ ವಿದ್ಯಾರ್ಥಿನಿಯರದ್ದೆ ಮೇಲುಗೈ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA| 14 ಜೂನ್ 2022

ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವ ಜೂನ್ 16ರಂದು ಶಂಕರ ಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭಾರಿಯ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಸ್ವರ್ಣ ಪದಕಗಳು ಮತ್ತು ನಗದು ಬಹುಮಾನಗಳು ವಿದ್ಯಾರ್ಥಿನಿಯರ ಪಾಲಾಗಿವೆ. UNIVERSITY

Shimoga Nanjappa Hospital

ಯಾರಿಗೆ ಎಷ್ಟು ಪದಕ ಲಭಿಸಿದೆ?

31ನೇ ಘಟಿಕೋತ್ಸವದಲ್ಲಿ

ಕನ್ನಡ ಎಂ.ಎ ವಿಭಾಗದ ಪ್ರಣೀತಾ ಎಂ.ಟಿ ಅವರು 8 ಸ್ವರ್ಣ ಪದಕ ಮತ್ತು 2 ನಗದು ಬಹುಮಾನ ಪಡೆದಿದ್ದಾರೆ.

ಎಂಬಿಎ ವಿಭಾಗದ ಯತೀಶ್ ಕೆ.ಯು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಎಂ.ಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ಅನುಷಾ ಎಸ್, ಎನ್.ಇ.ಎಸ್. ಇನ್ಸ್ ಟಿಟ್ಯೂಟ್ ಆಪ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಬಿ.ಕಾಂ ವಿಭಾಗದ ನಿವ್ಯಾ ಕೆ.ನಾಯಕ್ ಅವರು ತಲಾ 5 ಸ್ವರ್ಣ ಪದಕ ಪಡೆದಿದ್ದಾರೆ.

ಜ್ಞಾನ ಸಹ್ಯಾದ್ರಿಯ ಎಂ.ಎಸ್ಸಿ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಉಷಾ ಬಿ.ಎನ್ ಅವರು 4 ಸ್ವರ್ಣ ಪದಕ ಮತ್ತು 3 ನಗದು ಬಹುಮಾನ ಪಡೆದಿದ್ದಾರೆ.

ಇನ್ನು, ಎಂ.ಎ ಸಮಾಜಶಾಸ್ತ್ರ ವಿಭಾಗದ ನವೀನ್ ಕುಮಾರ್.ಸಿ, ಎಂ.ಎಸ್ಸಿ ಸಸ್ಯಶಾಸ್ತ್ರ ವಿಭಾಗದ ರಕ್ಷಿತಾ ಹೆಚ್.ಎಂ ಜೈನ್, ರಸಾಯನಶಾಸ್ತ್ರ ವಿಭಾಗದ ದಿವ್ಯಾ ಎಂ.ಸಿ, ಪರಿಸರ ವಿಜ್ಞಾನ ವಿಭಾಗದ ಸಂಪದಾ ಶಾಸ್ತ್ರಿ ತಲಾ 4 ಸ್ವರ್ಣ ಪದಕಗಳನ್ನು ಪಡೆದಿದ್ದಾರೆ.

ಎಂ.ಎ ರಾಜ್ಯಶಾಸ್ತ್ರ ವಿಭಾಗದ ಸೌರಭ ಎಸ್.ಕಾಮತ್, ಉರ್ದು ವಿಭಾಗದ ಅಬ್ದುಲ್ ಫತಾ, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಶ್ವೇತಾ ಎಸ್, ಎಂ.ಎಸ್ಸಿ ಪ್ರಾಣಿಶಾಸ್ತ್ರ ವಿಭಾಗದ ಸರಳ ವೈ.ಪಿ, ಎಂ.ಸಿ.ಎ ಸಂಜನಾ ಕೆ ಅವರು ತಲಾ 3 ಸ್ವರ್ಣ ಪದಕ ಪಡೆದಿದ್ದಾರೆ.

32ನೇ ಘಟಿಕೋತ್ಸವ

ಎಂ.ಎ ಕನ್ನಡ ವಿಭಾಗದ ದಿವ್ಯಾ ಹೆಚ್.ಎನ್ ಅವರು 11 ಚಿನ್ನದ ಪದಕ ಮತ್ತು 2 ನಗದು ಬಹುಮಾನ ಪಡೆದಿದ್ದಾರೆ.

ಎಂಬಿಎ ವಿಭಾಗದ ಪ್ರಿಯಾಂಕಾ ಟಿ ಅವರು 6 ಸ್ವರ್ಣ ಪದಕಗಳನ್ನು ಪಡೆದಿದ್ದಾರೆ.

ಎಂ.ಎ ಸಮಾಜಶಾಸ್ತ್ರ ವಿಭಾಗದ ತನೂಷಾ, ಎಂ.ಎಸ್ಸಿ ರಸಾಯನಶಾಸ್ತ್ರ ವಿಭಾಗದ ಸಂಯುಕ್ತಾ ಪೈ, ಎ.ಟಿ.ಎನ್.ಸಿ ಕಾಲೇಜು ಬಿ.ಕಾಂ ವಿದ್ಯಾರ್ಥಿನಿ ಮೇಘನಾ.ವಿ ಅವರು ತಲಾ 5 ಸ್ವರ್ಣ ಪದಕಗಳನ್ನು ಪಡೆದಿದ್ದಾರೆ.

ಗಣಿತಶಾಸ್ತ್ರ ವಿಭಾಗದ ಸಿಂಧು ಎನ್ ಅವರು 4 ಸ್ವರ್ಣ ಪದಕ ಮತ್ತು 2 ನಗದು ಬಹುಮಾನ ಪಡೆದಿದ್ದಾರೆ.

ಎಂ.ಎ ರಾಜ್ಯಶಾಸ್ತ್ರ ವಿಭಾಗದ ಅಶ್ವಿನಿ ಎಂ, ಎಂ.ಎಸ್ಸಿ ಪರಿಸರ ವಿಜ್ಞಾನ ವಿಭಾಗದ ಪೂಜಾ.ಎಸ್ ಅವರು ತಲಾ 4 ಸ್ವರ್ಣ ಪದಕ ಪಡೆದಿದ್ದಾರೆ.

ಬಿ.ಎಡ್ ಪದವಿಯಲ್ಲಿ ಆಯಿಷಾ ಫರ್ ಹೀನ್ ಶೇಖ್ 3 ಸ್ವರ್ಣ ಪದಕ ಮತ್ತು  1 ನಗದು ಬಹುಮಾನ ಪಡೆದಿದ್ದಾರೆ.

ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಂಜುಮ್ ಬಷೀರ್ ಸಾಬ್, ಎಂ.ಎ ಇಂಗ್ಲೀಷ್ ವಿಭಾಗದ ಅಲೀಶಾ ಜೋಸೆಫ್, ಎಂ.ಕಾಂ ವಿಭಾಗದ ಗಾಯತ್ರಿ ಕೆ.ಎ, ಎಂ.ಸಿ.ಎ ವಿಭಾಗದ ರಂಜಿತಾ ಸಿ.ಕೆ, ಎಂ.ಎಸ್ಸಿ ಸಸ್ಯಶಾಸ್ತ್ರ ವಿಭಾಗದ ಯಶಸ್ವಿನಿ ಎಂ, ಎಂ.ಎಸ್ಸಿ ಪ್ರಾಣಿಶಾಸ್ತ್ರ ವಿಭಾಗದ ರುಚಿತಾಶ್ರೀ, ಎಂ.ಎಸ್ಸಿ ಜೀವ ರಸಾಯನಶಾಸ್ತ್ರ ವಿಭಾಗದ ಸೃಷ್ಟಿ ಬಿ.ಎಂ ಅವರು ತಲಾ 3 ಸ್ವರ್ಣ ಪದಕ ಪಡೆದಿದ್ದಾರೆ.

ಚಿನ್ನದ ಬೇಟೆಯಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ

ಕುವೆಂಪು ವಿಶ್ವವಿದ್ಯಾಲಯದ ಎರಡು ಘಟಿಕೋತ್ಸವದಲ್ಲಿನ ಚಿನ್ನದ ಬೇಟೆಯಲ್ಲಿ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ.

31ನೇ ಘಟಿಕೋತ್ಸವದಲ್ಲಿ 71 ವಿದ್ಯಾರ್ಥಿಗಳು 127 ಸ್ವರ್ಣ ಪದಕ ಗಳಿಸಿದ್ದಾರೆ. ಈ ಪೈಕಿ 51 ವಿದ್ಯಾರ್ಥಿನಿಯರಿದ್ದರೆ, 20 ವಿದ್ಯಾರ್ಥಿಗಳಿದ್ದಾರೆ. ಇನ್ನು, ನಗದು ಬಹುಮಾನಗಳನ್ನೆಲ್ಲ ವಿದ್ಯಾರ್ಥಿನಿಯರೆ ಬಾಚಿಕೊಂಡಿದ್ದಾರೆ. 17 ನಗದು ಬಹುಮಾನಗಳನ್ನು 13 ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.

32ನೇ ಘಟಿಕೋತ್ಸವದಲ್ಲಿ 66 ವಿದ್ಯಾರ್ಥಿಗಳು 132 ಸ್ವರ್ಣ ಪದಕ ಗಳಿಸಿದ್ದಾರೆ. ಈ ಪೈಕಿ 14 ವಿದ್ಯಾರ್ಥಿಗಳು, 52 ವಿದ್ಯಾರ್ಥಿನಿಯರಿದ್ದಾರೆ. 17 ನಗದು ಬಹುಮಾನಗಳ ಪೈಕಿ 2 ವಿದ್ಯಾರ್ಥಿಗಳ ಪಾಲಾಗಿದ್ದರೆ, ಉಳಿದ 13 ನಗದು ಬಹುಮಾನಗಳು ವಿದ್ಯಾರ್ಥಿನಿಯರ ಪಾಲಾಗಿವೆ. UNIVERSITY

ಇದನ್ನೂ ಓದಿ – ಡಿ.ಹೆಚ್.ಶಂಕರಮೂರ್ತಿ ಸೇರಿ 6 ಮಂದಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 14, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment