ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 JUNE 2023
SHIMOGA : ಕೋಳಿ ಫಾರಂ ತೆರವು ಕಾರ್ಯಾಚರಣೆ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕನೊಬ್ಬ (Labor) ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆನ್ನು ಮೂಳೆ, ಎದೆ ಭಾಗದ ಕೆಲವು ಮೂಳೆಗಳು ಮುರಿದಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭದ್ರಾವತಿಯ ಮತ್ತಿಘಟ್ಟದ ಮಂಜುನಾಥ, ಗಾಯಗೊಂಡ ಕಾರ್ಮಿಕ (Labor). ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿಯಲ್ಲಿ ಕೋಳಿ ಫಾರಂ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘಟನೆ ಸಂಭವಿಸಿದೆ. ಕಟ್ಟಡ ತೆರವು ಮಾಡಲು ಮೇಲೆ ಹತ್ತಿದ್ದಾಗ ಸಿಮೆಂಟ್ ಶೀಟ್ ಮುರಿದಿದ್ದು ಮಂಜುನಾಥ್ ಕೆಳಗೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆಕ್‌ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಗಂಭೀರ ಸ್ಥಿತಿಗೆ ತಲುಪಿದ್ದ ಶಿವಮೊಗ್ಗದ ಸ್ನೇಕ್ ಕಿರಣ್ ಈಗ ಹೇಗಿದ್ದಾರೆ? ಆ ದಿನ ಹಾವು ಕಚ್ಚಿದ್ದು ಹೇಗೆ?
ಸುರಕ್ಷಿತ ಕ್ರಮಗಳನ್ನು ಅನುಸರಿಸದ ಹಿನ್ನೆಲೆ ಕಟ್ಟಡದ ಮಾಲೀಕ ಮತ್ತು ತೆರವು ಕಾರ್ಯಾಚರಣೆಯ ಮೇಸ್ತ್ರಿ ಹಮೀದ್ ಎಂಬುವವರ ವಿರುದ್ಧ ದೂರು ನೀಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





