ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಮಹಾ ಧರಣಿ (Protest) ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಮಿಕರು ಧರಣಿ ಪಾಲ್ಗೊಂಡಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೆಲಸದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಹಿಂಪಡೆಯಬೇಕು, ಕನಿಷ್ಠ ವೇತನವನ್ನು 31,500 ರೂ.ಗೆ ಹೆಚ್ಚಳ ಮಾಡಬೇಕು, ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದಾಗಬೇಕು, ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಯಾಗಿ ಕನಿಷ್ಠ 8 ಸಾವಿರ ರೂ. ಪಿಂಚಣಿ ನೀಡಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು, ಉದ್ಯೋಗ ಖಾತ್ರಿ ಯೋಜನೆಯ ದುಡಿತದ ದಿನಗಳನ್ನು 200ಕ್ಕೆ ಹೆಚ್ಚಳ ಮಾಡಬೇಕು, ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆ ಪುನಾರಂಭ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ-VISL ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ ಸಂಸದ, ಉತ್ಪಾದನಾ ಚುಟುವಟಿಕೆ ಪುನಾರಂಭಕ್ಕೆ ದಿನಾಂಕ ಫಿಕ್ಸ್
ಅಖಿಲ ಭಾರತ ವಿಮಾ ನೌಕರರ ಸಂಘ, ಜಿಲ್ಲಾ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ನೌಕರರ ಸಂಘ, ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಹಿಸಿದ್ದವು.