ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JANUARY 2023
SHIMOGA | ಬಸ್ಸಿನಿಂದ ಕೆಳಗಿಳಿದು ಅಂಗಡಿಯಲ್ಲಿ ನೀರಿನ ಬಾಟಲಿ ಖರೀದಿಸಿ ಮರಳುವ ಹೊತ್ತಿಗೆ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಕಳ್ಳತನವಾಗಿದೆ. ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ (shimoga ksrtc) ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹುಬ್ಬಳಿ ಮೂಲದ ಧೃತಿ ರೆಡ್ಡಿ ಎಂಬುವವರಿಗೆ ಸೇರಿದ 70 ಸಾವಿರ ರೂ. ಮೌಲ್ಯದ ಲೆನೊವೋ ಲ್ಯಾಪ್ ಟಾಪ್ ಮತ್ತು ಅದರ ಬ್ಯಾಗ್ ಕಳ್ಳತನವಾಗಿದೆ.
ಹೇಗಾಯ್ತು ಘಟನೆ?
ಧೃತಿ ಅವರು ಶಿವಮೊಗ್ಗದಲ್ಲಿರುವ ತಮ್ಮ ಸ್ನೇಹಿತೆಯ ಭೇಟಿಗೆ ಬಂದಿದ್ದರು. ಬಳಿಕ ಹುಬ್ಬಳ್ಳಿಗೆ ತೆರಳಲು ಶಿವಮೊಗ್ಗ ಪಣಜಿ ಬಸ್ ಹತ್ತಿದ್ದರು. ನೀರಿನ ಬಾಟಲಿ ಖರೀದಿಗೆಂದು ಲ್ಯಾಪ್ ಟಾಪ್ ಬ್ಯಾಗನ್ನು ಸೀಟಿನ ಮೇಲಿಟ್ಟು ಬಸ್ಸಿನಿಂದ ಕೆಳಗಿಳಿದಿದ್ದರು. ನೀರಿನ ಬಾಟಲಿ ಖರೀದಿಸಿ ಬಸ್ (shimoga ksrtc) ಹತ್ತಿದಾಗ ಲ್ಯಾಪ್ ಟ್ಯಾಪ್ ಬ್ಯಾಗ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಧೃತಿ ಅವರು ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

70 ಸಾವಿರ ರೂ. ಮೌಲ್ಯದ ಲೆನೊವೊ ಟಚ್ ಸ್ಕ್ರೀನ್ ಲ್ಯಾಪ್ ಟಾಪ್, 500 ರೂ. ಬ್ಯಾಗ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಲ್ಯಾಪ್ ಟಾಪ್ ಕಳವು ಇದೆ ಮೊದಲಲ್ಲ
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ (shimoga ksrtc) ಲ್ಯಾಪ್ ಟಾಪ್ ಕಳ್ಳತನ ಪ್ರಕರಣ ಇದೆ ಮೊದಲಲ್ಲ. ಪ್ರಯಾಣಿಕರು ಕೊಂಚ ಮೈಮರೆತರು ಬ್ಯಾಗ್, ಲ್ಯಾಪ್ ಟಾಪ್ ಕಳ್ಳತನವಾಗುತ್ತಿದೆ. ಪ್ರತಿ ಗಂಟೆಗೆ ಹತ್ತಾರು ಬಸ್ಸುಗಳು, ನೂರಾರು ಪ್ರಯಾಣಿಕರು ನಿಲ್ದಾಣದಿಂದ ಹಾದು ಹೋಗುತ್ತಾರೆ. ಈ ಸಂದರ್ಭ ಪ್ರಯಾಣಿಕರೆ ತಮ್ಮ ಬ್ಯಾಗಿನ ಕಡೆಗೆ ಹೆಚ್ಚು ನಿಗಾ ವಹಿಸಬೇಕಿದೆ. ಬೆಲೆ ಬಾಳುವ ವಸ್ತುಗಳಿದ್ದಾಗ ಇನ್ನಷ್ಟು ಮುತುವರ್ಜಿಯಿಂದ ನೋಡಿಕೊಳ್ಳಬೇಕಿದೆ.
ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















