SHIVAMOGGA LIVE NEWS | 16 FEBRURARY 2023
SHIMOGA : ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲರಾದ (Principal) ಪ್ರೊ. ಜಿ.ಆರ್.ಜಗದೀಶ್ ಅವರ ನಿಧನಕ್ಕೆ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಕಾಲೇಜು ಆವರಣದಲ್ಲಿ ಪ್ರಾಂಶುಪಾಲರಿಗೆ ಅಂತಿಮ ನಮನ ಸಲ್ಲಿಸಿದ ವಿದ್ಯಾರ್ಥಿಗಳು, ಅವರ ಪರವಾಗಿ ಘೋಷಣೆ ಕೂಗಿ ಕಣ್ಣೀರ ವಿದಾಯ ಹೇಳಿದರು.
ಪ್ರೊ. ಜಿ.ಆರ್.ಜಗದೀಶ್ ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳು ಆಘಾತಕ್ಕೊಳಗಾದವರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಲೇಜು ಆವರಣದಲ್ಲಿ ಅಂತಿಮ ದರ್ಶನ
ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ಮುಂಭಾಗ ಪ್ರೊ. ಜಿ.ಆರ್.ಜಗದೀಶ್ (Principal) ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಂತಿಮ ದರ್ಶನ ಪಡೆದರು. ಕೊನೆಗೆ ಪ್ರೊ. ಜಿ.ಆರ್.ಜಗದೀಶ್ ಅಮರ್ ರಹೇ ಎಂದು ಘೋಷಣೆ ಕೂಗಿ, ಕಣ್ಣೀರು ಸುರಿಸಿದರು.
ಪ್ರೊ. ಜಿ.ಆರ್.ಜಗದೀಶ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದರು. ಸ್ವಲ್ಪ ಸಮಯ ವಕೀಲರಾಗಿದ್ದರು. ಬಳಿಕ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಆರಂಭಿಸಿದರು. ಇದೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದರು. ರಾಜ್ಯದ ಕಾನೂನು ವಿಶ್ವವಿದ್ಯಾಲಯದ ಪ್ರಭಾರ ಉಪ ಕುಲಪತಿಯಾಗಿದ್ದರು. ಉಪನ್ಯಾಸಕರಾಗಿ ಪ್ರೊ. ಜಿ.ಆರ್.ಜಗದೀಶ್ ಅವರು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿದ್ದರು. ಇವರಿಂದ ಕಲಿತ ಹಲವರು ವಕೀಲರಾಗಿ ವಿವಿಧ ಜಿಲ್ಲೆಗಳ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟುಗಳಲ್ಲಿ ವಾದ ಮಾಡುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ವಾರ ಅತ್ಯಂತ ಮಹತ್ವದ್ದು, ಕಾರಣವೇನು? ಮೊದಲು ಲ್ಯಾಂಡ್ ಆಗುವ ವಿಮಾನ ಯಾವುದು?
ಇನ್ನು, ಪ್ರೊ. ಜಿ.ಆರ್.ಜಗದೀಶ್ ಅವರು ವಿವಿಧ ಸಾಂಸ್ಕೃತಿಕ ಸಂಘಟನೆಗಳಲ್ಲಿಯು ತೊಡಗಿಸಿಕೊಂಡಿದ್ದರು. ಅವರ ನಿಧನಕ್ಕೆ ಹಲವು ಸಂಘಟನೆಗಳು ಸಂತಾಪ ಸೂಚಿಸಿವೆ.