ಶಿವಮೊಗ್ಗದಲೈವ್.ಕಾಂ | SHIMOGA NEWS | 23 ಡಿಸೆಂಬರ್ 2021
ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ.
ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು.
ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು?
ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು ವಿಶ್ವವಿದ್ಯಾಲಯವು ಪರೀಕ್ಷೆ ನಡೆಸಲು ಮುಂದಾಗಿದೆ. ಕರ್ನಾಟಕ ಉಚ್ಛಾ ನ್ಯಾಯಾಲಯದ ತೀರ್ಪು ಲೆಕ್ಕಿಸದೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಕಾನೂನು ವಿವಿಯ ನಡೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದರು.
ಚಿನ್ಮಯ್, ನಂದೀಶ್, ದುಷ್ಯಂತ, ರಶ್ಮೀ, ಯಶಸ್ವಿನಿ, ಮಾನಸ, ಗೌತಮ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಈ ಸಂದರ್ಭ ಇದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ