ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಭದ್ರಾವತಿಯಲ್ಲಿ ನಡೆಯುತ್ತಿರುವ ಓ.ಸಿ, ಮಟ್ಕಾ ಸೇರಿದಂತೆ ವಿವಿಧ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತಾಲೂಕಿನಲ್ಲಿ ಓ.ಸಿ., ಮಟ್ಕಾ, ಇಸ್ಪೀಟ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಬದಲಾಗಿ ದೂರು ನೀಡಿದವರ ವಿರುದ್ಧವೆ ಸುಳ್ಳು ಮೊಕದಮೆ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗುತ್ತಿವೆ. ಅಕ್ರಮ ದಂಧೆಗಳಿಂದಾಗಿ ತಾಲೂಕಿನಲ್ಲಿ ನೂರಾರು ಕುಟಂಬಗಳು ಸಂಕಷ್ಟಕ್ಕೀಡಾಗಿವೆ. ಕೊಲೆ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ, ಭದ್ರಾವತಿಯಲ್ಲಿ ಇಸ್ಪೀಟು, ಓ.ಸಿ, ಮಟ್ಕಾ ದಂಧೆ ಹೆಚ್ಚಾಗಿದೆ. ಗೂಂಡಾವರ್ತನೆ ಮಿತಿ ಮೀರಿದೆ. ಭೂಮಿ ಕಬಳಿಕೆ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ಈಗಾಗಲೆ ಈ ಸರ್ಕಾರ ಬಂದು ಆರು ತಿಂಗಳಲ್ಲಿ ಮೂವರ ಹತ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ದೀಪಕ್ ಸಿಂಗ್, ಭದ್ರಾವತಿ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ಪ್ರಮುಖರಾದ ಚಂದ್ರೇಗೌಡ, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್ ಸೇರಿದಂತೆ ಹಲವರು ಇದ್ದರು.