ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ನಂತರದ ಗಲಭೆ ಸಂದರ್ಭ ಕೆಲವು ಯುವಕರು ಪೊಲೀಸರ ಎದುರಲ್ಲೆ ಮಾರಕಾಸ್ತ್ರ ಪ್ರದರ್ಶಿಸಿದ್ದಾರೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.
ಹರ್ಷ ಹತ್ಯೆ ಪ್ರಕರಣದ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೋಮವಾರ ಬೆಳಗ್ಗೆ ಹರ್ಷ ಅಂತಿಮ ಯಾತ್ರೆ ನಡೆಯಿತು. ಈ ಸಂದರ್ಭ ಹಲವು ಕಡೆ ಕಲ್ಲು ತೂರಟವಾಗಿತ್ತು. ಇದೆ ವೇಳೆ ವಿವಿಧೆಡೆ ದುಷ್ಕರ್ಮಿಗಳು ಲಾಂಗು, ಮಚ್ಚು, ದೊಣ್ಣೆಗಳನ್ನು ಪ್ರದರ್ಶಿಸಿದ್ದಾರೆ.
ಪೊಲೀಸರ ಎದುರಲ್ಲೆ ಮಾರಕಾಸ್ತ್ರ ಪ್ರದರ್ಶನ ಮಾಡಿದ್ದಾರೆ. ಇದರ ವಿಡಿಯೋಗಳು ಈಗ ವೈರಲ್ ಆಗಿವೆ. ಇಸ್ಲಾಂ ಪವರ್ ಎಂದು ಟೈಟಲ್ ಹಾಕಿ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ. ಸಹಜ ಸ್ಥಿತಿಗೆ ಮರಳುತ್ತಿರುವ ನಗರದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸಲಾಗುತ್ತಿದೆ.
ಇನ್ನು, ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ ಯುವಕರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.