ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JANUARY 2024
SHIMOGA : ಇನ್ನೋವಾ ಕಾರಿನಲ್ಲಿ ಗಾಂಜಾ ಮತ್ತು ಮಾರಕಾಸ್ತ್ರ ಸಾಗಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ಇನ್ನೋವಾ ಕಾರನ್ನು ಪೊಲೀಸರು ಮಂಡ್ಲಿ ಸಮೀಪ ತಪಾಸಣೆ ನಡೆಸಿದರು. ಈ ವೇಳೆ ಕಾರಿನಲ್ಲಿ 23 ಸಾವಿರ ರೂ. ಮೌಲ್ಯದ 440 ಗ್ರಾಂ ತೂಕದ ಒಣ ಗಾಂಜಾ ಪತ್ತೆಯಾಗಿದೆ. ಒಂದು ಮಚ್ಚು, ಭರ್ಚಿ, ಡ್ರ್ಯಾಗರ್ ಕೂಡ ಕಾರಿನಲ್ಲಿ ಸಿಕ್ಕಿದೆ. ಈ ಹಿನ್ನೆಲೆ ಕಾರು ಚಾಲಕ ಮಾರ್ನಮಿ ಬೈಲು ನಿವಾಸಿ ಅರ್ಬಾಜ್ ಅಲಿಯಾಸ್ ಹರ್ಬಾಜ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಡಿವೈಎಸ್‌ಪಿ ಬಾಲರಾಜ್ ಮೇಲ್ವಿಚಾರಣೆಯಲ್ಲಿ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್ ರವಿ ಪಾಟೀಲ್, ಪಿಎಸ್‌ಐ ವಸಂತ್ ನೇತೃತ್ವದ ತಂಡ ದಾಳಿಯಲ್ಲಿ ಭಾಗವಹಿಸಿತ್ತು.
ಇದನ್ನೂ ಓದಿ – ಇನ್ಮುಂದೆ ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಹೊಸ ಹೆಸರು, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















