ಶಿವಮೊಗ್ಗದಲ್ಲಿ ಬಂಜಾರ ಸಮುದಾಯದಿಂದ ಪತ್ರ ಚಳವಳಿ, ಸಿಎಂ ವಿಳಾಸಕ್ಕೆ ಸಾವಿರಾರು ಪತ್ರ ರವಾನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020

ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಯಿಂದ ಕೈಬಿಡುವಂತೆ ಸುಪ್ರೀಂ ಕೊರ್ಟ್ ಆದೇಶ ನೀಡಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪತ್ರ ಚಳವಳಿ ನಡೆಸಲಾಯಿತು.

https://www.facebook.com/liveshivamogga/videos/265616594780721/?t=0

ಏನಿದು ಪತ್ರ ಚಳವಳಿ?

ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಜಾರ ಸಮುದಾಯ ಒತ್ತಾಯಿಸಿದೆ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಮತ್ತು ತಾಂಡಗಳಲ್ಲಿ ಇರುವ ಬಂಜಾರ ಸಮುದಾಯದವರು ಪತ್ರ ಬರೆದಿದ್ದು, ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದೆ.

ಎಂಎಲ್‍ಎ ನೇತೃತ್ವದಲ್ಲಿ ಮೆರವಣಿಗೆ

ಶಾಸಕ ಅಶೋಕ್ ನಾಯ್ಕ್ ನೇತೃತ್ವದಲ್ಲಿ ಎಂಎಲ್‍ಎ ಕಚೇರಿಯಿಂದ ಮೆರವಣಿಗೆ ನಡೆಸಿದ ಬಂಜಾರ ಸಮುದಾಯದ ಪ್ರಮುಖರು, ಗೋಪಿ ಸರ್ಕಲ್ ಬಳಿ ಇರುವ ಅಂಚೆ ಇಲಾಖೆಯಲ್ಲಿ ಪತ್ರ ಚಳವಳಿ ನಡೆಸಿದರು.

102387672 1140499929644759 4079904853208540036 n.jpg? nc cat=102& nc sid=110474& nc ohc=eegGDVCc50UAX8ANKMX& nc ht=scontent.fblr11 1

ಮತ್ತೊಂದೆಡೆ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ನೇತೃತ್ವದಲ್ಲೂ ಪತ್ರ ಚಳವಳಿ ನಡೆಸಲಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಪ್ರಮುಖರು ಒತ್ತಾಯಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment