GOOD NEWS | ದೇಶದಲ್ಲೇ ಮೊದಲು, ಮೆಗ್ಗಾನ್ ಆಸ್ಪತ್ರೆಯ ಕರೋನ ವಾರ್ಡ್‍ನಲ್ಲಿ ಮತ್ತೊಂದು ವಿಭಿನ್ನ ಪ್ರಯೋಗ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

120830080 973000173179893 4449507748960184350 o.jpg? nc cat=109& nc sid=8024bb& nc ohc= qkJw9Hn9FMAX 9mH2k& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೋವಿಡ್ ರೋಗಿಗಳಿಗೆ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಗ್ರಂಥಾಲಯ ಆರಂಭಿಸಲಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರ ಆಸ್ಪತ್ರೆಯೊಂದರ ಕೋವಿಡ್‍ ವಾರ್ಡ್‍ನಲ್ಲಿ ಗ್ರಂಥಾಲಯ ಆರಂಭಿಸಲಾಗಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಗ್ರಂಥಾಲಯಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಷಡಾಕ್ಷರಿ, ಗ್ರಂಥಾಲಯದಿಂದ ಕೋವಿಡ್ ರೋಗಿಗಳ ಮಾನಸಿಕ ಒತ್ತಡ ದೂರವಾಗುವುದಲ್ಲದೆ ವಿಶೇಷ ಪುಸ್ತಕಗಳ ಓದಿನಿಂದ ಜ್ಞಾನವೂ ಹೆಚ್ಚಾಗುವುದು ಎಂದರು.

ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಮಾತನಾಡಿ, ಕೊರೋನಾ ಪಾಸಿಟಿವ್ ಬಂದರೆ ಸಾಕು ಅನೇಕರು ಆತಂಕ ಪಡುತ್ತಾರೆ. ಅದರಲ್ಲೂ ಕೋವಿಡ್ ವಾರ್ಡ್‌ನ ವಾತಾವರಣಕ್ಕೆ ಹೆದರುತ್ತಾರೆ ಹಾಗೂ ಅಕ್ಕಪಕ್ಕದ ಬೆಡ್‌ನವರು ಮೃತಪಟ್ಟರೆ ಸಂಪೂರ್ಣ ಕುಗ್ಗಿ ಹೋಗುತ್ತಾರೆ. ಇಂತಹ ಸಂದರ್ಭದಲ್ಲಿ ಮಾನಸಿಕ ಒತ್ತಡದಿಂದ ದೂರವಾಗಲು ಪುಸ್ತಕಗಳು ನೆರವಾಗುತ್ತವೆ. ಈ ನಿಟ್ಟಿನಲ್ಲಿ ಗ್ರಂಥಾಲಯ ಸಹಕಾರಿ ಎಂದರು.

120949479 1237666879928063 6433333095547640248 o.jpg? nc cat=104& nc sid=8024bb& nc ohc=V4W9bBtWu8EAX Y56Zv& nc ht=scontent.fixe1 1

ಜಿಲ್ಲಾ ಸರ್ಜನ್ ಡಾ. ರಘುನಂದನ್ ಮಾತನಾಡಿ, ಕೋವಿಡ್ ರೋಗಿಗಳ ಮನಸ್ಸನ್ನು ಕಾಯಿಲೆ ಕುರಿತ ಯೋಚನೆಯಿಂದ ಬೇರೆಡೆ ಸೆಳೆಯಲು ಹಾಗೂ ಜ್ಞಾನಾಭಿವೃದ್ಧಿಗೆ ಈ ಗ್ರಂಥಾಲಯ ಸಹಕಾರಿ. ಸರ್ಕಾರಿ ನೌಕರರ ಸಂಘ ಹಾಗೂ ವೈದ್ಯಕೀಯ ನೌಕರರ ಸಂಘ ಸೇರಿ ಉತ್ತಮ ಕೆಲಸ ಮಾಡಿದೆ ಎಂದರು.

121114945 1237666613261423 2644256312887050081 o.jpg? nc cat=111& nc sid=8024bb& nc ohc=ZnxpvpO2s18AX9HJf1S& nc ht=scontent.fixe1 1

ಜಿಲ್ಲಾ ಸರ್ಕಾರಿ ವೈದ್ಯಕೀಯ ನೌಕರರ ಸಂಘದ ಅಧ್ಯಕ್ಷ ಮ.ಸ. ನಂಜುಂಡಸ್ವಾಮಿ ಮಾತನಾಡಿ, ಕೋವಿಡ್ ರೋಗಿಗಳಿಗಾಗಿ ಗ್ರಂಥಾಲಯ ಸ್ಥಾಪನೆ ಮಾಡುತ್ತಿರುವುದು ಇಡೀ ದೇಶದಲ್ಲೇ ಮೊದಲು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಹಾಗೂ ಮೆಗ್ಗಾನ್ ವೈದ್ಯಾಧಿಕಾರಿಗಳ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್, ವಿಪ್ರ ನೌಕರರ ಸಂಘ, ರಾಷ್ಟ್ರೋತ್ತಾನ ಬಳಗ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಗ್ರಂಥಾಲಯಕ್ಕೆ ಪುಸ್ತಗಳನ್ನು ನೀಡಿವೆ ಎಂದರು. ಕಾರ್ಯಕ್ರಮದಲ್ಲಿ ಹೆಚ್.ಕೆ.ಕೇಶವ ಮೂರ್ತಿ, ವೈದ್ಯಕೀಯ ಸಂಘದ ಡಾ. ಹೇಮಲತಾ, ಪ್ರಭಾಕರ್, ಶಾಂತರಾಜ್, ಮತ್ತಿತರರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment