ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 DECEMBER 2023
SHIMOGA : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಏನಿದು ಪ್ರಕರಣ?
ಬಿ.ಹೆಚ್.ರಸ್ತೆಯಲ್ಲಿರುವ ಪಿಂಗಾರ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗ ಚಂದ್ರಶೇಖರ್ (30) ಎಂಬಾತನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಹತ್ಯೆ ಮಾಡಲಾಗಿತ್ತು. ಹಳೆ ದ್ವೇಷದ ಹಿನ್ನೆಲೆ ರಾಜೀವ್ ಗಾಂಧಿ
ಬಡಾವಣೆಯ ಪರಶುರಾಮ ಎಂಬಾತ ಕೃತ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಆಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಹರೀಶ್ ಪಟೇಲ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಬಿ.ಆರ್.ಪಲ್ಲವಿ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಪರಶುರಾಮ ಅಲಿಯಾಸ್ ಚಿಂಗಾರಿ (29) ಎಂಬಾತನಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಪುಷ್ಪಾ ಅವರು ವಾದಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು, ಹೇಗಾಯ್ತು ಘಟನೆ? ಮುಂದೇನಾಯ್ತು?
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






