ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 15 AUGUST 2024 : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ (Lighting) ಮಾಡಲಾಗಿದೆ. ಇವು ಜನರ ಕಣ್ಸೆಳೆಯುತ್ತಿವೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಗಮಗಿಸುತ್ತಿವೆ ಕಚೇರಿಗಳು
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ, ತಾಲೂಕು ಕಚೇರಿ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಿಗು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೇಸರಿ, ಬಿಳಿ, ಹಸಿರು ಬಣ್ಣಗಳಿಂದಲೇ ಕಚೇರಿಗಳನ್ನು ಅಲಂಕರಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಚಿವರಿಂದ ಇವತ್ತು ಧ್ವಜಾರೋಹಣ
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಇವತ್ತು ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪೊಲೀಸ್, ಎನ್‌ಸಿಸಿ, ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ತಾಲೂಕು ಕೇಂದ್ರಗಳಲ್ಲಿ ಶಾಸಕರು ಧ್ವಜಾರೋಹಣ ಮಾಡಲಿದ್ದಾರೆ. ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಇದನ್ನೂ ಓದಿ ⇒ ನೆಹರು ಸ್ಟೇಡಿಯಂಗೆ ಮಿನಿಸ್ಟರ್ ದಿಢೀರ್ ಭೇಟಿ, ಅವ್ಯವಸ್ಥೆ ಕಂಡು ಗರಂ, ಅಧಿಕಾರಿಗಳಿಗೆ 2 ದಿನದ ಡೆಡ್‌ಲೈನ್