SHIVAMOGGA LIVE NEWS | 15 NOVEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವಿದ್ಯುತ್ ಕಂಬದ ಸರಳುಗಳಿಂದ ಅಪಾಯ
SHIMOGA : ಸ್ಮಾರ್ಟ್ ಸಿಟಿ ಯೋಜನೆ ಅಡಿ ಭೂಗತ ಕೇಬಲ್ ಅಳವಡಿಸಲಾಗಿದ್ದು ವಿವಿಧ ಬಡಾವಣೆಯಲ್ಲಿ ವಿದ್ಯುತ್ ಕಂಬಗಳನ್ನು ತೆರವು ಮಾಡಲಾಗಿದೆ. ಆದರೆ ಹೊಸಮನೆ 1ನೇ ಅಡ್ಡರಸ್ತೆಯ ಗಜಾನನ ಏಜನ್ಸಿ ಮುಂಭಾಗ ವಿದ್ಯುತ್ ಕಂಬ ತೆರವು ಮಾಡಲಾಗಿದೆ. ಆದರೆ ಕೆಳ ಭಾಗದಲ್ಲಿ ಕಬ್ಬಿಣದ ಸರಳು ಹಾಗೆ ಬಿಡಲಾಗಿದೆ. ಈ ಸಂಬಂಧ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ತೆರವು ಮಾಡಿಬೇಕು ಎಂದು ಆಗ್ರಹಿಸಿದ್ದಾರೆ.
ಸಿಎಂ, ಸಚಿವರ ಕಚೇರಿ ಕಲಾಪ ವೆಬ್‌ಕಾಸ್ಟ್‌ಗೆ ಆಗ್ರಹ
SHIMOGA : ರಾಜ್ಯ ಸರ್ಕಾರ ಪಾರದಾರ್ಶಕ ಆಡಳಿತ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸಿದೆ. ಪತ್ರಿಕಾ ಹೇಳಿಕೆ ನೀಡಿರುವ ಸಮಿತಿಯ ಜಿಲ್ಲಾಧ್ಯಕ್ಷ ಎಸ್.ಕೆ.ಪ್ರಭು ಅವರು, ಮುಖ್ಯಮಂತ್ರಿ ಮತ್ತು ಸಚಿವರ ಅಧಿಕೃತ ಕಚೇರಿಯ ಕಲಾಪಗಳನ್ನು ವೆಬ್ ಕಾಸ್ಟ್ ಮಾಡಬೇಕು. ಎಲ್ಲಾ ಸರ್ಕಾರ ಕಚೇರಿಗಳ ಸಿಸಿಟಿವಿ ಅಳವಡಿಸಬೇಕು. ಸರ್ಕಾರದ ಎಲ್ಲಾ ಇಲಾಖೆಗಳ ಬಯೋಮೆಟ್ರಿಕ್ ಹಾಜರಾತಿ ಅಳವಡಿಸಬೇಕು ಸೇರಿದಂತೆ ಆಡಳಿತದಲ್ಲಿ ಪಾರದರ್ಶಕ ಅಳವಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ – WHATSAPP ಬಳಕೆದಾರರಿಗೆ ಸುಪ್ರೀಂ ಕೋರ್ಟ್ ಮಹತ್ವದ ಮೂರು ಸೂಚನೆ, ಏನದು?
ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಕ್ಕೆ ಸಂದರ್ಶನ
SHIMOGA : ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಎಂಬಿಬಿಎಸ್ ಮತ್ತು ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಶಿವಮೊಗ್ಗದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಹಾಗೂ ಸಾಗರದ ಉಪವಿಭಾಗೀಯ ಆಸ್ಪತ್ರೆ ಸಾಗರದಲ್ಲಿ ನ.16ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಹಾಜರಾಗಲು ಕೋರಿದೆ. ಅದೇ ದಿನ ಮೂಲ ದಾಖಲಾತಿ ಹಾಗೂ ಒಂದು ಜೆರಾಕ್ಸ್ ಪ್ರತಿ ಫೋಟೋದೊಂದಿಗೆ ಪರಿಶೀಲನೆ ಹಾಜರಾಗಬೇಕು. ಪರಿಶೀಲನೆ ನಂತರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






