ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಮುಂದುವರೆಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಕೆಲವು ಕೈಗಾರಿಕೆಗಳಿಗೆ ಈ ಅವಧಿಯಲ್ಲಿ ರಿಲೀಫ್ ನೀಡಲಾಗಿದೆ. ಇನ್ನು ದಿನಸಿ, ಮದ್ಯ ಮಾರಾಟದ ಕುರಿತು ಹೊಸ ನಿರ್ಧಾರ ಪ್ರಕಟಿಸಲಾಗಿದೆ.
ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಕರೋನ ಕಂಟ್ರೋಲ್‍ಗೆ ಲಾಕ್ ಡೌನ್ ಅವಧಿಯನ್ನು ಜೂನ್ 14ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲೆಯಲ್ಲಿ ಕಳೆದ 15 ದಿನದ ಹಿಂದೆ ಪಾಸಿಟಿವಿಟಿ ಪ್ರಮಾಣ ಶೇ.40ರಷ್ಟಿತ್ತು. ಈಗ ಅದು ಶೇ.18ಕ್ಕೆ ತಗ್ಗಿದೆ. ಆದರೆ ಕರೋನ ಪ್ರಮಾಣ ಇನ್ನಷ್ಟು ಕಂಟ್ರೋಲ್ ಮಾಡಲು ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದರು.
ಕೈಗಾರಿಕೆ, ದಿನಸಿ ಮತ್ತು ಮದ್ಯ
ಕೆಲವು ಕೈಗಾರಿಕೆಗಳಿಗೆ ರಿಲೀಫ್ ನೀಡಲಾಗಿದೆ. ರಫ್ತು ಮತ್ತು ರಕ್ಷಣಾ ಇಲಾಖೆ ಸಂಬಂಧ ಉತ್ಪಾದನೆಯಲ್ಲಿ ತೊಡಗಿರುವ ಕಾರ್ಖಾನೆಗಳು ಕೆಲಸ ಮಾಡಲು ಅವಕಾಶವಿದೆ.
ದಿನಸಿ ಅಂಗಡಿಗಳು ಪ್ರತಿದಿನ ಬೆಳಗ್ಗ 6 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ರಿಟೇಲ್ ವ್ಯಾಪಾರಕ್ಕೆ ಅವಕಾಶವಿದೆ. ಬುಧವಾರ ಮತ್ತು ಶನಿವಾರ ಹೋಲ್ ಸೇಲ್ ವ್ಯಾಪಾರ ನಡೆಸಬಹುದಾಗಿದೆ.
ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6 ರಿಂದ ಬೆಳಗ್ಗೆ 8 ಗಂಟೆವರೆಗೆ ಮದ್ಯ ಮಾರಾಟ ಮಾಡಬಹುದು. ಪಾರ್ಸಲ್‍ಗೆ ಮಾತ್ರ ಅವಕಾಶವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಆರ್.ಪ್ರಸನ್ನಕುಮಾರ್, ಶಾಸಕ ಕುಮಾರ್ ಬಂಗಾರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






