ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಲಾಕ್ಡೌನ್ ಅಲ್ಪ ಸಡಿಲಿಕೆ ಬೆನ್ನಿಗೆ ಶಿವಮೊಗ್ಗದಲ್ಲಿ ವಾಹನ ಮತ್ತು ಜನರ ಸಂಚಾರ ಹೆಚ್ಚಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ಸಂಖ್ಯೆ ದುಪ್ಪಟ್ಟಾಗಿದೆ.
ಅಗತ್ಯ ವಸ್ತುಗಳ ಖರೀದಿ, ಬ್ಯಾಂಕು, ಕಚೇರಿ ಸೇರಿದಂತೆ ವಿವಿಧೆಡೆಗೆ ತೆರಳಲು ಜನರು ರಸ್ತೆಗಿಳಿದಿದ್ದಾರೆ. ಇದರಿಂದ ವಾಹನಗಳು ಹೇರಳವಾಗಿದೆ.
ರಸ್ತೆಯಲ್ಲಿ ಬ್ಯಾರಿಕೇಡ್, ಅನಗತ್ಯ ಓಡಾಟಕ್ಕೆ ಬ್ರೇಕ್
ಶಿವಮೊಗ್ಗ ನಗರದಲ್ಲಿ ಕಳೆದ ವಾರ ಸೆಕ್ಟರ್ ವೈಸ್ ಸೀಲ್ ಡೌನ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖರ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಈ ಬ್ಯಾರಿಕೇಡ್ಗಳನ್ನು ಹಾಗೆ ಉಳಿಸಿಕೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅನಗತ್ಯವಾಗಿ ಸಂಚರಿಸುವವರನ್ನು ತಡೆದು ದಂಡ ಹಾಕುತ್ತಿದ್ದಾರೆ.
ಮೇ 3ರವರೆಗೆ ನಿಷೇಧಾಜ್ಞೆ
ಲಾಕ್ಡೌನ್ ಸ್ವಲ್ಪ ಸಡಿಲಿಕೆ ಆಗಿದೆ. ‘ಆದರೆ ಮೇ 3ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮುಂದುವರೆಯಲಿದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422