ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JUNE 2021
ಶಿವಮೊಗ್ಗದಲ್ಲಿ ಕರೋನ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ ಇನ್ನೊಂದು ವಾರ ಲಾಕ್ ಡೌನ್ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಅವರು ಸಿಎಂ ಮುಂದೆ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಅವರು ಕೋವಿಡ್ ಕುರಿತು ಹೇಳಿದ್ದೇನು? ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಕುರಿತು ಮನವಿ ಮಾಡಿದ್ದೇಕೆ? ಇಲ್ಲಿದೆ ಪಾಯಿಂಟ್ಗಳು
ಸಿಎಂಗೆ ಡಿಸಿ ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 9ರಂದು ಪಾಸಿಟಿವಿಟಿ ರೇಟ್ ಶೇ.9ಕ್ಕೆ ತಗ್ಗಿದೆ. ಏಪ್ರಿಲ್ 26ರ ಬಳಿಕ ಪಾಸಿಟಿವಿಟಿ ದರ ಹೆಚ್ಚಳವಾಗುತ್ತ ಸಾಗಿತು. ಮೇ 6 ರಿಂದ ಮೇ 22ರವರೆಗೆ ಶಿವಮೊಗ್ಗದಲ್ಲಿ ಕರೋನ ಪ್ರಕರಣಗಳು ಹೆಚ್ಚಳವಾಗಿದ್ದವು.
ಶಿವಮೊಗ್ಗ ನಗರ ಮತ್ತು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದರಿಂದ ಕಳೆದ 10 ದಿನದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುವುದು ತಗ್ಗಿದೆ. ಇದರಿಂದ ಜಿಲ್ಲೆಯಲ್ಲಿ ಜೂನ್ 9ರಂದು ಶೇ.9ಕ್ಕೆ ಇಳಿಕೆಯಾಗಿದೆ.
ಕೆಲವು ಕೈಗಾರಿಕೆಗಳು ಮತ್ತು ಶೇ.20ರಷ್ಟು ಕಾರ್ಮಿಕರು ಗಾರ್ಮೆಂಟ್ಸ್ಗಳು ಕೂಡ ಕೆಲಸ ಮಾಡುತ್ತಿವೆ. ಕೃಷಿ ಚಟುವಟಿಕೆಗಳು ಎಂದಿನಂತೆ ನಡೆಯುತ್ತಿವೆ.
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಕಡಿಮೆಯಾಗಿಲ್ಲ. ಕಳೆದ ಕೆಲವು ದಿನದಿಂದ ಮೂರರಿಂದ ಮೂರುವರೆ ಸಾವಿರ ಟೆಸ್ಟ್ಗಳನ್ನು ಮಾಡಲಾಗುತ್ತಿದೆ. ಜೂನ್ 9ರಂದು ಐದು ಸಾವಿರಕ್ಕೂ ಹೆಚ್ಚು ಟೆಸ್ಟ್ಗಳು ಮಾಡಿದ್ದೇವೆ.
ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಮತ್ತು ಆಕ್ಸಿಜನ್ಗೆ ಯಾವುದೆ ಕೊರತೆ ಇಲ್ಲವಾಗಿದೆ. ಈಗ ಎಲ್ಲವು ಕಂಟ್ರೋಲ್ಗೆ ಬಂದಿದೆ.
ಜಿಲ್ಲೆಯಾದ್ಯಂತ 19 ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಲಾಗಿದೆ. ಸೋಂಕಿತರನ್ನು ಕಡ್ಡಾಯವಾಗಿ ಕೇರ್ ಸೆಂಟರ್ನಲ್ಲಿ ಇರಿಸಲಾಗುತ್ತಿದೆ. ಇನ್ನು 400ಕ್ಕೂ ಹೆಚ್ಚು ಕಂಟೈನ್ಮೆಂಟ್ ಜೋನ್ಗಳನ್ನು ಸ್ಥಾಪಿಸಲಾಗಿದೆ. ಎಲ್ಲದರ ಮೇಲೆ ನಿಗಾ ವಹಿಸಲಾಗುತ್ತಿದೆ.
ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವಿಡಿಯೋ ರಿಪೋರ್ಟ್
ನಗರ ಪ್ರದೇಶಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು. ಬಳಿಕ ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚಳವಾದವು. ಈಗ ನಗರ ಪ್ರದೇಶದಲ್ಲಿ ಶೇ.50ರಷ್ಟು ಪ್ರಕರಣಗಳಿವೆ. ಗ್ರಾಮೀಣ ಭಾಗದಲ್ಲಿ ಶೇ.50ರಷ್ಟು ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿಚಾರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.61ರಷ್ಟು ಲಸಿಕೆ ಹಾಕಲಾಗಿದೆ. ಶೇ.84ರಷ್ಟು ಮುಂಚೂಣಿ ಕಾರ್ಯಕರ್ತರು, ಶೇ.90ರಷ್ಟು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ.
ಒಂದು ದಿನ ಹತ್ತರಿಂದ ಹದಿನೈದು ಸಾವಿರ ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಜಿಲ್ಲೆಗೆ ಲಸಿಕೆ ವಿತರಿಸಿದರೆ ಅನುಕೂಲವಾಗಲಿದೆ.
ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿದರೆ, ಜಿಲ್ಲೆಯಲ್ಲಿ ಕರೋನ ಪ್ರಕರಣಗಳು ಮತ್ತಷ್ಟು ಕಂಟ್ರೋಲ್ಗೆ ಬರಲಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422