SHIVAMOGGA LIVE NEWS | 14 AUGUST 2023
SHIMOGA : ರಾಜ್ಯಾದ್ಯಂತ ಸೆ.9ರಂದು ಲೋಕ ಅದಾಲತ್ (Lok Adalat) ನಡೆಯಲಿದೆ. ಆ ದಿನ ಶಿವಮೊಗ್ಗ (Shimoga) ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಯು ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ (Karnataka State Legal Services Authority) ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎನ್.ಚಂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾರೆಲ್ಲ ಭಾಗವಹಿಸಬಹುದು?
ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನಗಳ, ಕೌಟುಂಬಿಕ, ಭೂ ಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೊಂದಣಿ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕು ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಲು ಅವಕಾಶ ಇದೆ. ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದ್ದು ಇದರ ಸದುಪಯೋಗ ಕಕ್ಷಿಗಾರರು ಪಡೆಯಬಹುದಾಗಿದೆ.
ಇದನ್ನೂ ಓದಿ-ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ದಿನ? ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200