SHIVAMOGGA LIVE NEWS | 5 DECEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಭಯಮುಕ್ತ ಚುನಾವಣೆ ನಡೆಸಲು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ. ಸೆಕ್ಟರ್ ಅಧಿಕಾರಿಗಳು ಲೋಪವಿಲ್ಲದೆ ಕಾರ್ಯನಿರ್ವಹಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚಿಸಿದರು.
ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ (Lok Sabha elections) ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಸಂದರ್ಭ ಸೆಕ್ಟರ್ ಅಧಿಕಾರಿಗಳ ಮತ್ತು ಸೆಕ್ಟರ್ ಪೊಲೀಸ್ ಅಧಿಕಾರಿಗಳ ಜವಾಬ್ದಾರಿ, ಕರ್ತವ್ಯ ಹಾಗೂ ಕಾರ್ಯ ವಿಧಾನದ ಕುರಿತು ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ತರಬೇತಿ ನೀಡುವರು. ತರಬೇತಿ ಪಡೆದ ಸೆಕ್ಟರ್ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ವಕೀಲರು, ಒಂದೂವರೆ ಗಂಟೆ ರಸ್ತೆ ತಡೆ, ಆಕ್ರೋಶಕ್ಕೆ ಕಾರಣವೇನು?
ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರನಾಯ್ಕ್ ಪಿಪಿಟಿ ಮೂಲಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ, ಸ್ಥಾನಮಾನ, ಸಿದ್ದತೆ, ಕಾರ್ಯವಿಧಾನದ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






