ಶಿವಮೊಗ್ಗದ 8 ಕಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ, ಯಾರೆಲ್ಲರ ಮನೆ, ಕಚೇರಿ ಮೇಲೆ ದಾಳಿಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 MAY 2023

SHIMOGA : ಜಿಲ್ಲೆಯ ಇಬ್ಬರು ಇಂಜಿನಿಯರ್‌ಗಳ ಮನೆ, ಕಚೇರಿ, ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು 8 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

Lokayuktha-Raid-on-Engineer-house-in-Shimoga

ಯಾರೆಲ್ಲರ ಮೇಲೆ ದಾಳಿಯಾಗಿದೆ?

ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜನಿಯರ್‌ ಪ್ರಶಾಂತ್‌ ಅವರ ಮನೆ, ತೋಟದ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಪ್ರಶಾಂತ್‌ ಅವರಿಗೆ ಸಂಬಂಧಿಸಿದಂತೆ ಒಟ್ಟು 5 ಕಡೆ ಪರಿಶೀಲನೆ ನಡೆಯುತ್ತಿದೆ. ಶಿವಮೊಗ್ಗದ ಹೊಸಮನೆ ಬಡಾವಣೆಯ 3ನೇ ಮುಖ್ಯ ರಸ್ತೆಯ ಕೆ.ಹೆಚ್‌.ಬಿ. ಕಾಲೋನಿಯ ಮನೆ, ಭದ್ರಾವತಿ ತಾಲೂಕು ಶೆಟ್ಟಿಹಳ್ಳಿಯ ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇನ್ನು, ಶರಾವತಿ ನಗರದಲ್ಲಿರುವ ಪ್ರಶಾಂತ್‌ ಅವರ ಪತ್ನಿಯ ಸಹೋದರ ನಾಗೇಶ್‌ ಎಂಬುವವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ಮಾಡಿದ್ದಾರೆ.

ಜಿಲ್ಲಾ ಪಂಚಾಯಿತಿ ಜೂನಿಯರ್‌ ಇಂಜಿನಿಯರ್‌ ಶಂಕರ ನಾಯ್ಕ್‌ ಅವರ ಮನೆ ಮೇಲೆಯೂ ದಾಳಿಯಾಗಿದೆ. ಶಂಕರ್‌ ನಾಯ್ಕ್‌ ಅವರಿಗೆ ಸಂಬಂಧಿಸಿದ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಇದನ್ನೂ ಓದಿ – ನಾಡ ಕಚೇರಿಗೆ ಎಂಎಲ್‌ಎ ದಿಢೀರ್‌ ಭೇಟಿ, ಉಪ ತಹಶೀಲ್ದಾರ್‌ಗೆ ಖಡಕ್‌ ಸೂಚನೆ

ಲೋಕಾಯುಕ್ತ ಚಿತ್ರದುರ್ಗ ಎಸ್‌.ಪಿ ವಾಸುದೇವರಾಮ್‌ ಅವರ ನೇತೃತ್ವದಲ್ಲಿ ಜಿಲ್ಲೆಯ ಎಂಟು ಕಡೆ ದಾಳಿ ಮಾಡಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ ಈಶ್ವರ್‌ ನಾಯಕ್‌, ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಮೃತ್ಯುಂಜಯ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment