ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 JULY 2024
SHIMOGA : ಶಿವಮೊಗ್ಗ ಮತ್ತು ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ಕಾರ್ಯ ನಡೆಸುತ್ತಿದ್ದಾರೆ.
ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ದಾಳಿ
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್ ಅವರ ಶಿವಮೊಗ್ಗದ ಕೃಷಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿಯಾಗಿದೆ. ಮನೆಯಲ್ಲಿರುವವರ ವಿಚಾರಣೆ ಮತ್ತು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಶಿವಮೊಗ್ಗ ರಿಪೋರ್ಟ್
ಲೋಕಾಯುಕ್ತರ ಮತ್ತೊಂದು ತಂಡ ಭದ್ರಾವತಿಯ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಅವರ ಮನೆ ಮೇಲೆ ದಾಳಿ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಭದ್ರಾವತಿ ರಿಪೋರ್ಟ್
ರಾಜ್ಯದ ವಿವಿಧೆಡೆ ದಾಳಿ
ಲೋಕಾಯುಕ್ತ ಅಧಿಕಾರಿಗಳು ಇವತ್ತು ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಯದಗಿರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 12 ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422