BREAKING NEWS – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿ ಮನೆಯಲ್ಲಿ ಪರಿಶೀಲನೆ

ಶಿವಮೊಗ್ಗ: ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (lokayukta raid) ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲು ದಾಳಿಯಾಗಿದೆ.

ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ.

ದಾವಣಗೆರೆಯಿಂದ ಎರಡು ಜೀಪುಗಳಲ್ಲಿ ಆಗಮಿಸಿರುವ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

Lokayukta-Raid-in-shimoga-near-krushi-nagara

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜಾತಿ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಬೀದಿ ನಾಯಿ ದಾಳಿ

Lokayukta-Raid-in-shimoga-near-krushi-nagara

Leave a Comment