SHIVAMOGGA LIVE NEWS | 20 JANUARY 2024
SHIMOGA : ಜಿಲ್ಲಾ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಅಧಿಕಾರಿಗಳನ್ನು ಪ್ರಶ್ನಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಬಿಲ್ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಶುಕ್ರವಾರ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಡತಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ವಿಚಾರಣೆ ಮಾಡಿದರು. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ನಾಯ್ಕ್ ಸೇರಿದಂತೆ ಚಿತ್ರದುರ್ಗದ ಲೋಕಾಯುಕ್ತ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ