ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

 ಶಿವಮೊಗ್ಗ  LIVE 

ಶಿವಮೊಗ್ಗ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರಿಗೆ ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರೂಪ್ಲಾ ನಾಯ್ಕ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ (Lokayukta raid) ನಡೆಸಿದ್ದಾರೆ.

ಶಿವಮೊಗ್ಗದ ಬಸವನಗುಡಿಯಲ್ಲಿರುವ ರೂಪ್ಲಾ ನಾಯ್ಕ್ ಅವರ ಬಾಡಿಗೆ ಮನೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

lokayukta-raid-in-Shimoga-basavanagudi-

ಇದನ್ನೂ ಓದಿ » ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು

ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಒಟ್ಟು ಆರು ತಂಡಗಳಾಗಿ ಈ ದಾಳಿಯನ್ನು ನಡೆಸಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment