ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಲೋಕಾಯುಕ್ತ ತಂಡ ದಿಢೀರ್‌ ಭೇಟಿ, ಪರಿಶೀಲನೆ

 ಶಿವಮೊಗ್ಗ  LIVE 

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್) ಸಂಸ್ಥೆಯ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ (Lokayukta raid) ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ 8 ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿದೆ.  

ಶಿಮುಲ್ ಸಂಸ್ಥೆಯಲ್ಲಿ ನಡೆಯುತ್ತಿರುವ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಹಣದ ವ್ಯವಹಾರ ನಡೆದಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ದೂರಿನ ಹಿನ್ನೆಲೆ ದಾಖಲೆ ಪರಿಶೀಲಿಸಲು ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್‌ ಎಷ್ಟು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment