ಶಿವಮೊಗ್ಗ ತಹಶೀಲ್ದಾರ್‌ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಡತಗಳ ಪರಿಶೀಲನೆ, ದಿಢೀರ್‌ ದಾಳಿಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ದುರಾಡಳಿತ, ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿಗೆ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು. 

ದಾವಣಗೆರೆ, ಚಿತ್ರದುರ್ಗದಿಂದ ಬಂದಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನಾಲ್ಕು ತಂಡ ಹಾಗೂ ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಪೈಕಿ ಒಂದು ತಂಡ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿತ್ತು. 

ಏನೇನೆಲ್ಲ ಪರಿಶೀಲಿಸಿದರು?

ಪರಿಹಾರವಾಗದೇ ಇರುವ ಸಾರ್ವಜನಿಕರ ಅಹವಾಲು, ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ವಿವರ, ಬಾಕಿ ಇರುವ ಕಡತಗಳು, ಸುದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿರುವುದಕ್ಕೆ ಕಾರಣ, ಹಕ್ಕು ಬದಲಾವಣೆ, ಭೂ ಮಂಜೂರಾತಿ, ಭೂಮಿ, ಬಗರ್‌ಹುಕುಂ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಬಗ್ಗೆಯೂ ಮಾಹಿತಿ ಪಡೆದರು. 

Shimoga-Taluk-Office-General-Image

ಜಮೀನುಗಳಿಗೆ ದಾರಿಗೆ ಬೇಡಿಕೆ, ಸಿಂಧುತ್ವ ಪ್ರಮಾಣ ಪತ್ರ, ಮೈನಾರಿಟಿ, ಸಾಲ್ವೆನ್ಸಿ ಸರ್ಟಿಫಿಕೇಟ್, ಜಾತಿ ಪ್ರಮಾಣಪತ್ರ ಪಡೆಯಲು ಸಲ್ಲಿಕೆಯಾದ ಅರ್ಜಿಗಳು ಅದರಲ್ಲಿ ನಿಗದಿತ ಕಾಲಮಿತಿಯಲ್ಲಿ ಎಷ್ಟು ವಿಲೇವಾರಿ ಆಗಿವೆ. ಎಷ್ಟು ಬಾಕಿ ಉಳಿದಿವೆ ಎಂಬುದನ್ನು ಪರಿಶೀಲಿಸಿದರು.

JNNCE-Admission-Advt-scaled

ಈ ಬಾರಿ ಅತಿವೃಷ್ಟಿ ವೇಳೆ ಮನೆ, ಜಾನುವಾರುಗಳಿಗೆ ಆಗಿರುವ ಹಾನಿ, ಪರಿಹಾರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಾಹಿತಿ ಪಡೆದರು. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ಈ ತಂಡಗಳ ಮೇಲ್ವಿಚಾರಣೆ ನಡೆಸಲಾಯಿತು.

ಇದನ್ನೂ ಓದಿ » ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?

lokayukta Raid on shimoga tahasildhar office

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment