ಶಿವಮೊಗ್ಗ: ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಪಾಲಿಕೆಯ ಕಂದಾಯ ವಿಭಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದರು.
ಇಂದು ಸಂಜೆ ವೇಳೆಗೆ ಲೋಕಾಯುಕ್ತ ಎಸ್.ಪಿ. ನೇತೃತ್ವದ ನಿಯೋಗ ಪಾಲಿಕೆಯ ಕಂದಾಯ ವಿಭಾಗಕ್ಕೆ ದಿಢೀರ್ ಭೇಟಿ ನೀಡಿತು. ಕಂದಾಯ ವಿಭಾಗದಲ್ಲಿ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಲೋಕಾಯುಕ್ತರ ಭೇಟಿ ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಕಮಿಷನರ್ ಕವಿತಾ ಯೋಗಪ್ಪನವರ್ ಕೂಡ ಕಂದಾಯ ವಿಭಾಗಕ್ಕೆ ದೌಡಾಯಿಸಿದರು.
ಸಂಜೆ 5.30ರವರೆಗೆ ಕಂದಾಯ ವಿಭಾಗದಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತರು ಆಯಕ್ತೆ ಕವಿತಾ ಯೋಗಪ್ಪನವರ್ ಅವರಿಂದ ಮಾಹಿತಿ ಪಡೆದು ತೆರಳಿದ್ದಾರೆ. ಇದು ನಿಯಮಿತವಾದ ಪರಿಶೀಲನೆ ಮಾತ್ರ ಎಂದು ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ » ಆಪರೇಷನ್ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200