SHIVAMOGGA LIVE | 24 JULY 2023
SHIMOGA | ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ (Lokayuktha Raid) ನಡೆದಿದೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಏನಿದು ಪ್ರಕರಣ?
ಹನುಮಂತ ಬನ್ನಿಕೋಡ್ ಎಂಬುವವರಿಗೆ ಸಂಬಂಧಿಸಿದ ಖಾತೆ ಬದಲಾವಣೆಗೆ ಶಿರಸ್ತೇದಾರ್ ಜಿ.ಅರುಣ್ ಕುಮಾರ್ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು 1.5 ಲಕ್ಷ ರೂ. ಹಣ ಸ್ವೀಕರಿಸಿದಾಗ ಲೋಕಾಯುಕ್ತ ದಾಳಿಯಾಗಿದೆ (Lokayuktha Raid).
.jpeg)
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್ 10 ಸುದ್ದಿಗಳು
ಶಿರಸ್ತೇದಾರ್ ಜಿ.ಅರುಣ್ ಕುಮಾರ್ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಆಗಿದ್ದಾರೆ.
ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ್, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಚೇರಿಯಲ್ಲಿ ತನಿಖೆ ಮುಂದುವರೆದಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





