BREAKING NEWS | ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿ

SHIVAMOGGA LIVE | 24 JULY 2023

SHIMOGA | ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ (Lokayuktha Raid) ನಡೆದಿದೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

Lokayuktha-Raid-on-Shirasthedar-arun-kumar

ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ.

Nanjappa Hospital Advertisement

ಏನಿದು ಪ್ರಕರಣ?

ಹನುಮಂತ ಬನ್ನಿಕೋಡ್ ಎಂಬುವವರಿಗೆ ಸಂಬಂಧಿಸಿದ ಖಾತೆ ಬದಲಾವಣೆಗೆ ಶಿರಸ್ತೇದಾರ್ ಜಿ.ಅರುಣ್ ಕುಮಾರ್ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು 1.5 ಲಕ್ಷ ರೂ. ಹಣ ಸ್ವೀಕರಿಸಿದಾಗ ಲೋಕಾಯುಕ್ತ ದಾಳಿಯಾಗಿದೆ (Lokayuktha Raid).

Parishrama NEET Academy

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್‌ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್‌ 10 ಸುದ್ದಿಗಳು

ಶಿರಸ್ತೇದಾರ್ ಜಿ.ಅರುಣ್ ಕುಮಾರ್ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಆಗಿದ್ದಾರೆ.

ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ್, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಚೇರಿಯಲ್ಲಿ ತನಿಖೆ ಮುಂದುವರೆದಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment