ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOSANAGARA / RIPPONPETE NEWS | 22 MAY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪೂರೈಕೆ ಕಡಿಮೆ ಇದ್ದರೂ ಲಸಿಕೆಗೆ ಬೇಡಿಕೆ ಹೆಚ್ಚುತ್ತಲೆ ಇದೆ. ಲಸಿಕೆಗಾಗಿ ಜನರು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ತಿಂಗಳು ಕಳೆದರೂ ಲಸಿಕೆ ನೀಡುವ ವಿಧಾನ ಬದಲಾಗಿಲ್ಲ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕುವೆಂಪು ರಸ್ತೆಯಲ್ಲಿ ಆರೋಗ್ಯ ಇಲಾಖೆಯ ತರಬೇತಿ ಕೇಂದ್ರದಲ್ಲಿ ಲಸಿಕಾ ಕೇಂದ್ರ ಸ್ಥಾಪಿಸಲಾಗಿದೆ. ಲಸಿಕೆಗಾಗಿ ಪ್ರತಿದಿನ ಇಲ್ಲಿ ನೂರಾರು ಜನರು ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ಸೂಕ್ತ ನಿರ್ವಹಣೆ ಇಲ್ಲದೆ ಇರುವುದರಿಂದ ಇವತ್ತು ಹಲವರು ತಲೆಸುತ್ತು ಬಂದಿ ಬಿದ್ದಿದ್ದಾರೆ.
ಇಲ್ಲಿ ಮೊದಲು ಬಂದವರಿಗೆ ಅದ್ಯತೆ ನೀಡಲಾಗುತ್ತದೆ. ಆದ್ದರಿಂದ ಜನರು ಬೆಳಗ್ಗೆ ಬೇಗ ಬಂದು ಕ್ಯೂನಲ್ಲಿ ನಿಲ್ಲುತ್ತಾರೆ. ತಿಂಡಿ ತಿನ್ನದೆ ಬರುವುದರಿಂದ ಬಿಸಿಲಿನ ಝಳಕ್ಕೆ ಹೈರಾಣಾಗುತ್ತಿದ್ದಾರೆ. ಇವತ್ತು ಕ್ಯೂನಲ್ಲಿ ನಿಂತಿದ್ದ ಹಲವರು ತಲೆಸುತ್ತು ಬಂದು ಬಿದ್ದಿದ್ದಾರೆ.
ಈ ಬಗ್ಗೆ ಪತ್ರಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಗಮನ ಸೆಳೆದರು. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಅವರ ಬಳಿ ಈ ಕುರಿತು ಚರ್ಚೆ ನಡೆಸುತ್ತೇನೆ. ಶೀಘ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.
ಜನರಿಗೆ ನೆರಳು ಅಥವಾ ಕೂರಲು ವ್ಯವಸ್ಥೆ ಮಾಡಬೇಕಿದೆ. ಬೆಳಗ್ಗೆ ಬೇಗ ಟೋಕನ್ ಕೊಡುವಂತಾದರೆ ಜನರು ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ಸಂಕಷ್ಟ ಅನುಭವಿಸುವುದು ತಪ್ಪಲಿದೆ. ಕಾದು ಕಾದು ಕೊನೆಗೆ ಲಸಿಕೆ ಸಿಗದೆ ಹಿಂತಿರುಗುವ ಸಮಸ್ಯೆಯು ಇಲ್ಲವಾಗಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]