ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಬಡಾವಣೆಯ ಕಳೆದ ರಾತ್ರಿ ಅಗ್ನಿ ಅವಘಢ ಸಂಭವಿಸಿದ್ದು, ಗ್ಯಾರೇಜ್ ಒಂದರದಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ.
ಸಂಜೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣದಲ್ಲಿ ಇಡೀ ಗ್ಯಾರೇಜ್ಗೆ ಆವರಿಸಿದೆ. ಅಕ್ಕಪಕ್ಕದ ಮಳಿಗೆಗಳಿಗು ಬೆಂಕಿ ವ್ಯಾಪಾಸುವ ಆತಂಕವಿತ್ತು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
