‘ಮಲೆನಾಡಿಗರಿಗೆ ಹೆಮ್ಮೆಯ ವಿಚಾರ, ಶಿವಮೊಗ್ಗಕ್ಕೆ ಐತಿಹಾಸಿಕ ಕಾರ್ಯಕ್ರಮʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

SHIMOGA : ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಅದರಲ್ಲೂ ಈ ಯುವನಿಧಿ ಯೋಜನೆಗೆ ಚಾಲನೆ ಸಿಕ್ಕಿದೆ. ಸ್ವಾಮಿ ವಿವೇಕಾನಂದ ಅವರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಇದನ್ನೂ ಓದಿ – ‘ಗ್ಯಾರಂಟಿ ಯೋಜನೆ ಉದ್ದೇಶ ಹಣ ಕೊಟ್ಟು ಜೇಬು ತುಂಬಿಸುವುದಲ್ಲ’, ಇಲ್ಲಿದೆ ಡಿಕೆಶಿ ಭಾಷಣದ 3 ಪಾಯಿಂಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment