ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 12 JANUARY 2024
SHIMOGA : ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಫ್ರೀಡಂ ಪಾರ್ಕ್ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಅದರಲ್ಲೂ ಈ ಯುವನಿಧಿ ಯೋಜನೆಗೆ ಚಾಲನೆ ಸಿಕ್ಕಿದೆ. ಸ್ವಾಮಿ ವಿವೇಕಾನಂದ ಅವರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಇದನ್ನೂ ಓದಿ – ‘ಗ್ಯಾರಂಟಿ ಯೋಜನೆ ಉದ್ದೇಶ ಹಣ ಕೊಟ್ಟು ಜೇಬು ತುಂಬಿಸುವುದಲ್ಲ’, ಇಲ್ಲಿದೆ ಡಿಕೆಶಿ ಭಾಷಣದ 3 ಪಾಯಿಂಟ್






