ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 NOVEMBER 2022
SHIMOGA | ದಮ್ಮು, ತಾಕತ್ತು ಎಂದು ಹೇಳಿಕೆ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ಥರ (sharavathi protest) ಸಮಸ್ಯೆ ಪರಿಹರಿಸುವ ವಿಚಾದರಲ್ಲಿ ಯಾಕೆ ದಮ್ಮು, ತಾಕತ್ತು ಪ್ರದರ್ಶಿಸುತ್ತಿಲ್ಲ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪ್ರಶ್ನಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಸ್ಯೆ ಬಗೆಹರಿಸುವ ಕುರಿತು ವಿಶ್ವಾಸ ವ್ಯಕ್ತಪಡಿಲ್ಲ. ಕೇವಲ ಆಶ್ವಾಸ ಕೊಟ್ಟಿದ್ದಾರೆ. ಜಿಲ್ಲಾಧಿಕಾರಿ ಅವರಿಗೆ ವರದಿ ಕೇಳಿದ್ದೇನೆ. ಬಳಿಕ ಪ್ರಧಾನಿ ಬಳಿ ಚರ್ಚೆ ಮಾಡುವುದಾಗಿ ಹೇಳಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗಡುವು ಇವತ್ತಿಗೆ ಮುಕ್ತಾಯ
ಶರಾವತಿ ಸಂತ್ರಸ್ಥರ ಸಮಸ್ಯೆ ಬಗೆಹರಿಸುತ್ತೇವೆ ಎಂದುವರು ಇವತ್ತು ಸಂಜೆಯೊಳಗೆ ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡಬೇಕಿದೆ. ಅವರು ಕೇಳಿದ 15 ದಿನದ ಗಡುವು ಇವತ್ತು ಪೂರ್ಣಗೊಳ್ಳಲಿದೆ ಎಂದರು.
ಜನಾಕ್ರೋಶ ಹೋರಾಟಕ್ಕೆ ಸಜ್ಜು
ಕಾಂಗ್ರೆಸ್ ಪಕ್ಷದ ವತಿಯಿಂದ ಶರಾವತಿ ಸಂತ್ರಸ್ಥರ ಪರವಾಗಿ ಜನಾಕ್ರೋಶ ಹೋರಾಟ ನಡೆಸಲಾಗುತ್ತಿದೆ. ನ.28ರಂದು ಬೆಳಗ್ಗೆ ಆಯನೂರಿನಿಂದ ಪಾದಯಾತ್ರೆ ನಡೆಸಲಾಗುತ್ತದೆ. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆಯು ಆಯನೂರಿನಿಂದ ಖಾಸಗಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ. ಅಲ್ಲಿಂದ ಅಮೀರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್ ಮೂಲಕ ಎನ್ಇಎಸ್ ಮೈದಾನ ತಲುಪಲಿದೆ ಎಂದರು.
ಸಂಜೆ 4 ಗಂಟೆಗೆ ಎನ್ಇಎಸ್ ಮೈದಾನದಲ್ಲಿ ಸಮಾವೇಶ ನಡೆಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನ ಕುಮಾರ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಇದ್ದರು.