ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MARCH 2021
ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಂಭ್ರಮ ಆಚರಿಸಿಕೊಂಡರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಭಿಮಾನಿಗಳಿಂದ ರಕ್ತದಾನ ಶಿಬಿರ
ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿದ್ದರು. ರಕ್ತದಾನ ಶಿಬಿರಕ್ಕೆ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು.
ಪುಸ್ತಕ, ಸಸಿಗಳ ವಿತರಣೆ
ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಅಲ್ಲದೆ ಕಾರ್ಯಕ್ರಮಕ್ಕೆ ಬಂದಿರುವ ಪ್ರತಿಯೊಬ್ಬರಿಗೂ ಹೂವಿನ ಸಸಿ ನೀಡಲಾಯಿತು.
‘ಮಧು ಅಣ್ಣ’ ಕೇಕ್ ಕಟ್
ಅಭಿಮಾನಿಗಳು ವಿಶೇಷ ಕೇಕ್ ತಯಾರಿಸಿ ತಂದಿದ್ದ ಕೇಕನ್ನು ಮಧು ಬಂಗಾರಪ್ಪ ಕತ್ತರಿಸಿದರು. ಮಧು ಅಣ್ಣ ಎಂದು ಅಕ್ಷರ ರೂಪದಲ್ಲಿ ಬೃಹತ್ ಕೇಕ್ ಸಿದ್ಧಪಡಿಸಲಾಗಿತ್ತು.
ಇದನ್ನೂ ಓದಿ | ಹುಟ್ಟುಹಬ್ಬದ ದಿನ ಕಾಂಗ್ರೆಸ್ ಸೇರ್ಪಡೆ ಕುರಿತು ಮೌನ ಮುರಿದ ಮಧು ಬಂಗಾರಪ್ಪ
ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ ಅವರು, ಬಹು ವರ್ಷದಿಂದ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ ಎಂದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]