SHIVAMOGGA LIVE | 5 AUGUST 2023
SHIMOGA : ಒಂದೇ ತಾಯಿಯ ಮಕ್ಕಳಂತೆ ಒಗ್ಗೂಡಿ ಬಲಿಷ್ಠ ಭಾರತ ನಿರ್ಮಾಣ (Strong India) ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಎಸ್ಸೆಸ್ಸೆಲ್ಸಿ , ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಸ್ಎಸ್ಯುಐ ಸಂಘಟನೆ ವತಿಯಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ಇದನ್ನೂ ಓದಿ – ಶಿವಮೊಗ್ಗದ ‘ಹರೋಹರ ಜಾತ್ರೆ’ ದಿನಾಂಕ ಘೋಷಣೆ, ಜುಲೈ ಬದಲು ಆಗಸ್ಟ್ ತಿಂಗಳಲ್ಲಿ ನಡೆಯುತ್ತಿರುವುದೇಕೆ?
ಮಕ್ಕಳ ಮುಂದೆ ಸತ್ಯ ಹೇಳಬೇಕು. ಮಕ್ಕಳು ದೇವರ ಸಮ. ಮಕ್ಕಳ ಮುಂದೆ ಸುಳ್ಳು ಹೇಳಬಾರದು. ಸುಳ್ಳು ಹೇಳಿದರೆ ಅದು ಶಾಪವಾಗಿ ಪರಿಣಮಿಸುತ್ತದೆ. ಇದನ್ನು ನಮ್ಮ ತಂದೆ ಬಂಗಾರಪ್ಪ ಅವರು ಹೇಳಿದ್ದಾರೆ. ಮಕ್ಕಳನ್ನು ನಾವು ದೇವರ ಸ್ಥಾನದಲ್ಲಿ ನೋಡುತ್ತೇವೆ. ಅಂತಹ ಮಕ್ಕಳ ಪ್ರತಿಭೆಗೆ ಗೌರವ ಕೊಡುವ ಕೆಲಸ ಮಾಡುತ್ತಿದ್ದಿರಿ. ನಾವು ಶಿವಮೊಗ್ಗದಲ್ಲಿ ಹುಟ್ಟಿ ಬೆಳೆದು ಬಂದಿದ್ದೇವೆ. ಬೆಂಗಳೂರಿಗೆ ಬಂದ ಮೇಲೆ ರಾಜಕೀಯದೊಂದಿಗೆ ಹಲವು ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.
ಇಂದಿನ ಈ ವ್ಯವಸ್ಥೆಯಲ್ಲಿ ಅವಶ್ಯಕವಾಗಿರುವ ಸಂದರ್ಭದಲ್ಲಿ ನಿಮ್ಮ ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ನೀವು ಎಲ್ಲವನ್ನೂ ಗಮನಿಸಿ ತೆಗೆದುಕೊಳ್ಳುವ ತೀರ್ಮಾನ ಬಹಳ ಮುಖ್ಯವಾಗಿರುತ್ತದೆ. ದೇಶವನ್ನು ಒಗ್ಗೂಡಿಸಲು ನಮ್ಮ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸಿದರು ಎಂದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಎನ್ಎಸ್ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ಜಿಲ್ಲಾಧ್ಯಕ್ಷ ವಿಜಯ್, ಮಾಜಿ ಶಾಸಕ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್ ಮೌರ್ಯ, ಪ್ರಮುಖರಾದ ಎನ್.ರಮೇಶ್, ಪಲ್ಲವಿ, ಯಮುನಾ ರಂಗೇಗೌಡ, ಮಧುಸೂದನ್, ಚೇತನ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200