SHIVAMOGGA LIVE NEWS | 26 SEPTEMBER 2023
SHIMOGA : ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಜನತಾ ದರ್ಶನ (Janata Darshana) ಕಾರ್ಯಕ್ರಮ ತಾಲೂಕು ಮಟ್ಟಕ್ಕು ವಿಸ್ತರಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಕುವೆಂಪು ರಂಗಮಂದಿರದಲ್ಲಿ ಸೋಮವಾರ ಜನತಾ ದರ್ಶನ (Janata Darshana) ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸಿದ ಬಳಿಕ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.
ಜನತಾ ದರ್ಶನದಲ್ಲಿ ಜನರ ಅಹವಾಲುಗಳನ್ನು ಆಲಿಸಲಾಗಿದೆ. ಮನವಿ ಸ್ವೀಕರಿಸಿದ್ದು ಆಯಾ ಇಲಾಖೆಗೆ ಅವುಗಳನ್ನು ವರ್ಗಾಯಿಸಲಾಗಿದೆ. ಒಂದು ವಾರದ ಒಳಗೆ ಅರ್ಜಿಗಳ ವಿಲೇವಾರಿ ಆಗಬೇಕು. ಸರ್ಕಾರದ ಇತಿಮಿತಿಯೊಳಗೆ ಪ್ರಕರಣಗಳನ್ನು ಪರಿಶೀಲಿಸಿ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು.
ಜನತಾ ದರ್ಶನ ಅತ್ಯಂತ ಸಮಾಧಾನ ತಂದಿದೆ. ಬಹತೇಕ ಜನರಿಗೆ ತಮ್ಮ ಸಮಸ್ಯೆಗೆ ಎಲ್ಲಿ ನೆರವು ಸಿಗಲಿದೆ ಎಂಬುದು ಗೊತ್ತಿರುವುದಿಲ್ಲ. ಯೋಜನೆಗಳು, ಕಾನೂನಿನ ಕುರಿತು ಸಂಪೂರ್ಣ ಮಾಹಿತಿ ಇರುವುದಿಲ್ಲ. ಆದ್ದರಿಂದ ಗೊಂದಲಕ್ಕೀಡಾಗಿದ್ದಾರೆ. ಜನತಾ ದರ್ಶನದಿಂದ ಅರ್ಜಿ ಸಲ್ಲಿಸಲು, ಯೋಜನೆಗಳ ಕುರಿತು ಮಾಹಿತಿ ಪಡೆಯಲು ಜನರಿಗೆ ಅವಕಾಶ ದೊರೆತಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಚುನಾವಣಾ ಕಚೇರಿ ಶುರು ಮಾಡಿದ ಆಯನೂರು ಮಂಜುನಾಥ್, ಕುತೂಹಲ ಮೂಡಿಸಿದ ನಡೆ
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ತಾಲೂಕು ಹಂತದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿತ್ತು. ತಾಲೂಕು ಮಟ್ಟದಲ್ಲಿಯೇ ಜನರ ಸಮಸ್ಯೆಗಳು ಪರಿಹಾರ ಆಗುವ ನಿಟ್ಟಿನಲ್ಲಿ ಜನತಾ ದರ್ಶನ ಆಯೋಜಿಸಬೇಕಿದೆ. ಆಯಾ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸಲು ಅವಕಾಶವಾಗಲಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ವಿವಿಧ ಇಲಾಖೆಗಳ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜನತಾ ದರ್ಶನದಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಜನರು ತಮ್ಮ ಮನವಿ ಸಲ್ಲಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200