ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಪ್ರವಾಸ ದಿಢೀರ್‌ ರದ್ದು, ಕಾರಣವೇನು? ಅಭಿಮಾನಿಗಳಿಗೆ ನಿರಾಸೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 30 MAY 2023

SHIMOGA : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ (Cancelled). ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ.

Minister-Madhu-Bangarappa-Flex-Near-Sahyadri-College-in-Shimoga

ಸಚಿವರಾದ ಮೇಲೆ ಮಧು ಬಂಗಾರಪ್ಪ ಅವರು ಮೇ 31ರಂದು ಮೊದಲ ಬಾರಿ ಜಿಲ್ಲೆಗೆ ಆಗಮಿಸಬೇಕಿತ್ತು. ಹಾಗಾಗಿ ಅವರ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ, ಅಭಿನಂದನಾ ಸಮಾರಂಭ ಆಯೋಜಿಸಿದ್ದರು. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು.

ಇದನ್ನೂ ಓದಿ – ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನೂ 4 ಎಲೆಕ್ಟ್ರಿಕ್‌ ಬಸ್‌ ಸೇವೆ ಆರಂಭ, ಯಾವ್ಯಾವ ಬಸ್ಸಿನ ಟೈಮಿಂಗ್‌ ಏನು?

ಶಾಲೆಗಳು ಪುನಾರಂಭ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಬೇಕಿತ್ತು. ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ ಆಯೋಜಿಸಲಾಗಿತ್ತು. ಈಗ ಪ್ರವಾಸ ರದ್ದಾಗಿರುವುದರಿಂದ ಎಲ್ಲ ಕಾರ್ಯಕ್ರಮಗಳು ರದ್ದಾಗಿದೆ (Cancelled).

SHIVAMOGGA-LIVE-NITIN-KAIDOTLU

ತುರ್ತು ಮೀಟಿಂಗ್, ಸಂಪುಟ ಸಭೆ

ವಿಧಾನಸಭೆ ಚನಾವಣೆ ವೇಳೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಗ್ಯಾರಂಟಿ ಭರವಸೆಗಳ ಈಡೇರಿಕೆ ಸಂಬಂಧ ಜೂನ್‌ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಇದರ ಪೂರ್ವಭಾವಿಯಾಗಿ ಹಲವು ಸಭೆಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ ಎಂದು ತಿಳಿದು ಬಂದಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment