ಮಧು ಬಂಗಾರಪ್ಪಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ, ಕಾರಣವೇನು?

ಶಿವಮೊಗ್ಗ: ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಎಸ್. ಮಧು ಬಂಗಾರಪ್ಪ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕು ಎಂದು ಶ್ರೀ ನಾರಾಯಣಗುರು ವಿಚಾರ ವೇದಿಕೆ (SNGV) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಆಗ್ರಹಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಹಲವರು ಸಚಿವರಾಗಿ ಯಶಸ್ವಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಣ ಸಚಿವರಾಗಿ ಈಡಿಗ ಸಮುದಾಯದ ಮಧು ಬಂಗಾರಪ್ಪ ಅವರು ಇಲಾಖೆಯಲ್ಲಿ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಈ ಹಿನ್ನಲೆ ಮುಂಬರುವ ಸಂಪುಟ ಪುನರಚನೆ ವೇಳೆ ಸಮುದಾಯದ ಹಿತದೃಷ್ಟಿಯಿಂದ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು” ಎಂದು ಒತ್ತಾಯಿಸಿದರು.

SNGV-President-Praveen-Hireidagodu-Press-Meet.

ರಾಜ್ಯದಲ್ಲಿ ನಾಲ್ಕನೇ ಅತಿ ದೊಡ್ಡ ಜನಸಂಖ್ಯೆ ಹೊಂದಿರುವ ಈಡಿಗ ಸಮುದಾಯಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡುತ್ತಿರುವುದು ಸಾಲುವುದಿಲ್ಲ. ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಇದರೊಂದಿಗೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಗವಿಯಪ್ಪ ಅವರಿಗೂ ನೂತನ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ನಟರಾಜ್, ಯೋಗೀಶ್ ಹಿರಿಯಡ್ಕ, ವಿಶಾಲ್ ಕುಮಾರ್, ರೇವಣ್ಣ, ಪುರುಷೋತ್ತಮ್ ಕೆ.ಪಿ., ಬಸವರಾಜ್ ಹಾಗೂ ಮೋಹನ್ ಶಿಂಧವಾಡಿ ಉಪಸ್ಥಿತರಿದ್ದರು.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp