SHIVAMOGGA LIVE NEWS | 13 ಮಾರ್ಚ್ 2022
ರಷ್ಯಾ, ಉಕ್ರೇನ್ ಯುದ್ಧದ ಪರಿಣಾಮ ಮೆಡಿಕಲ್ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಭಾರತಕ್ಕೆ ಮರಳಿರುವವರ ಮುಂದಿನ ಶಿಕ್ಷಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯುದ್ದದ ಕಾರಣ ರಾಜ್ಯದ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ. ಅವರ ಮೆಡಿಕಲ್ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು. ಈ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.
ತಮ್ಮ ಕಾಲೇಜಿನಿಂದಲೂ ನೆರವು
ಇನ್ನು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿರುವ ಶಾಸಕ ಮಧು ಬಂಗಾರಪ್ಪ, ಉಕ್ರೇನ್ ದೇಶದಿಂದ ಮರಳಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗದಂತೆ ವಿದ್ಯಭ್ಯಾಸಕ್ಕೆ ನೆರವು ನೀಡಲು ಕರ್ನಾಟಕ ವೈದ್ಯಕೀಯ ವಿಶ್ವವಿದ್ಯಾಲಯಗಳ ಒಕ್ಕೂಟ ನಿರ್ಧರಿಸಿದೆ. ಶಿವಮೊಗ್ಗದ ಶರಾವತಿ ದಂತ ವೈದ್ಯಕೀಯ ವಿಶ್ವವಿದ್ಯಾಲಯದಲ್ಲೂ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸರ್ಕಾರ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200