ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIMOGA, 31 AUGUST 2024 : ಶರಾವತಿ ನದಿ ನೀರುನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಾಸಭಾ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.
ಮಹಾಸಭಾ ಮನವಿಯಲ್ಲಿ 3 ಪ್ರಮುಖಾಂಶ
ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯಲು ಸುಮಾರು 400 ಕಿ.ಮೀ. ಆಗುತ್ತದೆ. ಇಷ್ಟು ದೂರ ನೀರು ಒಯ್ಯುವುದು ವೈಜ್ಞಾನಿಕವಲ್ಲ. ಇಂತಹ ಯೋಜನೆಯಿಂದ ಯಾರಿಗೂ ಲಾಭವಿಲ್ಲ. ದಟ್ಟ ಕಾಡಿನ ಮಧ್ಯೆ 350 ಎಕರೆ ಜಗದಲ್ಲಿ ಪಂಪ್ ಸ್ಟೋರೇಜ್ ಮಾಡಿ ವಿದ್ಯುತ್ ಉತ್ಪಾದಿಸುವುದು, ನದಿ ನೀರನ್ನು ಕೊಳವೆ ಮೂಲಕ ಅಷ್ಟು ದೂರ ಹರಿಸುವಂಥ ಯೋಜನೆಗಳು ಸರಿಯಲ್ಲ. ಮಲೆನಾಡಿನ ಹಳ್ಳಿಗಳಿಗೆ ಬೇಸಿಗೆಯಲ್ಲಿ ಈಗಲು ಟ್ಯಾಂಕರ್‌ನಲ್ಲಿ ನೀರು ಕೊಡುವ ಸ್ಥಿತಿ ಇದೆ.
ಶರಾವತಿ ನದಿ ಕೇವಲ 135 ಕಿ.ಮೀ ಹರಿಯಲಿದೆ. ಇಷ್ಟು ಚಿಕ್ಕ ನದಿಯ ಮೇಲೆ ದೊಡ್ಡ ಮಟ್ಟಿಗೆ ದೌರ್ಜನ್ಯವಾಗಿದೆ. ಹಿರೇಭಾಸ್ಕರ ಅಣೆಕಟ್ಟು ನಿರ್ಮಿಸಿದ್ದರಿಂದ ಹೊನ್ನಾವರದಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ನದಿ ನೀರು ಸಮುದ್ರ ಸೇರುವ ಸ್ಥಳದಲ್ಲಿ ಹಲವು ಹಳ್ಳಿಗೆ ಸಂಕಷ್ಟ ಎದುರಾಗಿದೆ. ಒಂದು ವೇಳೆ ನದಿ ನೀರು ಸಮುದ್ರ ಸೇರುವುದು ಕಡಿಮೆಯಾದಲ್ಲಿ 15 ಕಿ.ಮೀ.ವರೆಗೆ ಉಪ್ಪು ನೀರು ನುಗ್ಗುತ್ತದೆ. ಇದರಿಂದ ಜೀವ ವೈವಿಧ್ಯತೆಗೆ ಹಾನಿಯಾಗಿದೆ.

25 ಸಾವಿರ ಕೋಟಿ ರೂ. ವೆಚ್ಚ ಮಾಡಿ ಇಷ್ಟು ದೂರದಿಂದ ನೀರು ಕೊಂಡೊಯ್ದು ಏನು ಸಾಧಿಸಲು ಸಾಧ್ಯ. ಅಲ್ಲಿಯೇ ಇರುವ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕು. ಅದಕ್ಕೆ ಅಲ್ಲಿಯ ಜನಪ್ರತಿನಿಧಿಗಳು ಆಸಕ್ತಿ ವಹಿಸಬೇಕು. ಸರ್ಕಾರ ಈ ಯೋಜನೆ ಕೈ ಬಿಡದೆ ಇದ್ದರೆ ಜಿಲ್ಲಾದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ






