ಶಿವಮೊಗ್ಗ ಲೈವ್
ಶಿವಮೊಗ್ಗ: ಭದ್ರಾ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣಾ ಸಮಿತಿ ವತಿಯಿಂದ ನಡೆಸುತ್ತಿರುವ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ನ.30ರಂದು ಶಿವಮೊಗ್ಗ ನಗರದ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ರೈತ ಸಂಘದ ಸಂಸ್ಥಾಪಕ ಸದಸ್ಯ ಕೆ.ಟಿ. ಗಂಗಾಧರ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ನೀರಿನ ಅಗತ್ಯವಿದೆ. ಹೀಗಾಗಿ, ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಕನಿಷ್ಠ 20 ದಿನ ನೀರು ಹರಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಂಜುನಾಥೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
