ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 FEBRUARY 2024
SHIMOGA : ನಗರದ ಹೊಳೆ ಬಸ್ ನಿಲ್ದಾಣದಲ್ಲಿ ರೈತರೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಬ್ಲೇಡ್ನಿಂದ ಹಲ್ಲೆ ನಡೆಸಲಾಗಿದೆ. ಗೋಪಿಶೆಟ್ಟಿಕೊಪ್ಪದ ವೆಂಕಟೇಶ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ತಮ್ಮ ಜಮೀನಿನಲ್ಲಿ ಕೆಲಸಕ್ಕೆ ಜನ ಬೇಕು ಎಂದು ಫೆ.21ರಂದು ಬೆಳಗ್ಗೆ ಹೊಳೆ ಬಸ್ ನಿಲ್ದಾಣದ ಬಳಿ ಬಂದಿದ್ದರು. ಈ ಸಂದರ್ಭ ತರೀಕೆರೆಯ ರಫೀಕ್ ಎಂಬಾತ ವೆಂಕಟೇಶ್ ಅವರನ್ನು ‘ಅರ್ಧ ಬಾಂಡ್ಲಿʼ ಎಂದು ಕರೆದು ಕೆಣಕಿದ್ದಾನೆ. ಇದನ್ನು ಪ್ರಶ್ನಿಸಿದಾಗ ರಫೀಕ್ ತನ್ನ ಬರ್ಮುಡಾ ಚಡ್ಡಿಯಟ್ಟಿದ್ದ ಬ್ಲೇಡ್ ತೆಗೆದು ವೆಂಕಟೇಶ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಮುಷ್ಠಿ ಕಟ್ಟಿ ಗುದ್ದಿದ್ದಾನೆ ಎಂದು ಆರೋಪಿಸಲಾಗಿದೆ.
ವೆಂಕಟೇಶ್ ಅವರ ಪರಿಚಿತರು ಮತ್ತು ಸ್ಥಳೀಯರು ಗಲಾಟೆ ಬಿಡಿಸಿದ್ದಾರೆ. ಗಾಯಗೊಂಡಿದ್ದ ವೆಂಕಟೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ತುಂಗಾ ನದಿಯಲ್ಲಿ ಉಡುಪಿ ಜಿಲ್ಲೆ ವ್ಯಕ್ತಿಯ ಮೃತದೇಹ ಪತ್ತೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






