ಶಿವಮೊಗ್ಗದಲ್ಲಿ ಟೀ ಗ್ಲಾಸ್‌ನಿಂದ ಕ್ಯಾಂಟೀನ್‌ ಮಾಲೀಕನ ತಲೆಗೆ ಹೊಡೆದು, ಡಿಚ್ಚಿ ಕೊಟ್ಟ ಗ್ರಾಹಕ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 5 AUGUST 2023

SHIMOGA : ಕ್ಯಾಂಟೀನ್‌ನಲ್ಲಿ ಟೀ ಮತ್ತು ಸಿಗರೇಟ್‌ನ ಹಣ ಕೇಳಿದ ಮಾಲೀಕನ ಮೇಲೆ ಗ್ರಾಹಕನೊಬ್ಬ ಹಲ್ಲೆ ನಡೆಸಿದ್ದಾನೆ. ಟೀ ಗ್ಲಾಸ್‌ನಿಂದಲೇ (Tea Glass) ಕ್ಯಾಂಟೀನ್‌ ಮಾಲೀಕನ ತಲೆಗೆ ಹೊಡೆದು ಗಾಯಗೊಳಿಸಿದ್ದಾನೆ.

Crime-News-General-Image

ಹಳೆ ಮಂಡ್ಲಿಯ ಅಮೃತ ರೈಸ್‌ ಮಿಲ್‌ ಸಮೀಪ ಇರುವ ಸಯ್ಯದ್‌ ನಜರುಲ್ಲಾ ಎಂಬುವವರ ಟೀ ಕ್ಯಾಂಟೀನ್‌ನಲ್ಲಿ ಘಟನೆ ಸಂಭವಿಸಿದೆ. ಅಜೀಜ್‌ ಖಾನ್‌ ಎಂಬಾತ ಕ್ಯಾಂಟೀನ್‌ಗೆ ಬಂದು ಟೀ ಕುಡಿದು, ಸಿಗರೇಟ್‌ ಪಡೆದು ಸೇದಿದ್ದಾನೆ. ಹಣ ಕೇಳಿದಾಗ ಮಾಲೀಕ ಸಯ್ಯದ್‌ ನಜರುಲ್ಲಾ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ, ತಪ್ಪಿತು ದೊಡ್ಡ ಅನಾಹುತ, ಘಟನೆಗೆ ಕಾರಣವೇನು?

ಅಜೀಜ್‌ ಖಾನ್‌ ಗಾಜಿನ ಟೀ ಗ್ಲಾಸ್‌ನಿಂದ (Tea Glass) ಮಾಲೀಕನ ತಲೆಗೆ ಹೊಡೆದಿದ್ದಾನೆ. ಕೊರಳ ಪಟ್ಟಿ ಹಿಡಿದು ತಲೆಗೆ ಡಿಚ್ಚಿ ಹೊಡೆದಿದ್ದಾನೆ. ಕ್ಯಾಂಟೀನ್‌ ಒಳಗೆ ನುಗ್ಗಿ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿ ನಷ್ಟ ಉಂಟು ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 5, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment