ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 3 AUGUST 2023

SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (KSRTC BUS STAND) ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಮೃತಪಟ್ಟಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ

ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. 70 ರಿಂದ 75 ವರ್ಷ ವಯಸ್ಸು. ಸುಮಾರು 5 ಅಡಿ 5 ಇಂಚು ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, 2 ಇಂಚು ಕಪ್ಪು ಬಿಳಿ ಮಿಶ್ರಿತ ಕೂದಲು, 1 ಇಂಚು ಉದ್ದ ಗಡ್ಡ ಮೀಸೆ ಇದೆ. ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡೊಪೇಟೆ ಪೊಲೀಸ್ ಠಾಣೆ ಸಂಖ್ಯೆ: 08182-261414 ಅಥವಾ 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2023

Leave a Comment