ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿದ ಯುವಕ, ಧಗಧಗ ಹೊತ್ತಿ ಉರಿದ ಬೈಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 NOVEMBER 2022

SHIMOGA | ತಮ್ಮ ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೆ ತನ್ನ ಬೈಕಿಗೆ ಬೆಂಕಿ (fire) ಹಚ್ಚಿದ್ದಾನೆ. ಇದರಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

Shimoga Nanjappa HOspital

ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧಗಧಗ ಹೊತ್ತಿ ಉರಿದ ಬೈಕ್ (fire)

ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಕೆಲವೇ ಕ್ಷಣದಲ್ಲಿ ಬೈಕು ಹೊತ್ತಿ ಉರಿದಿದೆ. ಇದನ್ನು ಗಮನಿಸಿದ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದ ಸಾರ್ವಜನಿಕರು ಆತಂಕಕ್ಕೀಡಾದರು.

ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಆಕ್ರೋಶಕ್ಕೆ ಕಾರಣವೇನು?

ಡಾ. ಅಂಬೇಡ್ಕರ್ ಕಾಲೋನಿಯ ನಿವಾಸಿಗಳು ತುಂಗಾ ಏತ ನೀರಾವರಿ ಯೋಜನೆ ಜಾಗ ಒತ್ತುವರಿ ಮಾಡಿ ಮನೆ ಕಟ್ಟಿಕೊಂಡಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಅದನ್ನು ತೆರವುಗೊಳಿಸಲಾಗಿತ್ತು. ಈ ಸಂದರ್ಭ ನಿವಾಸಿಗಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆ ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಜಿಲ್ಲೆಯಾದ್ಯಂತ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ವಿಶೇಷ ಕಾರ್ಯಾಚರಣೆ, 800ಕ್ಕೂ ಹೆಚ್ಚು ಕೇಸ್ ದಾಖಲು

ಆದರೆ ಈತನಕ ತಮಗೆ ನ್ಯಾಯಾ ಸಿಕ್ಕಿಲ್ಲ ಎಂದು ರಾಜು ಆಕ್ರೋಶಗೊಂಡಿದ್ದ. ಪ್ಲಾಸ್ಟಿಕ್ ಹೂವುಗಳನ್ನು ಮಾರಾಟ ಮಾಡುವ ಉದ್ಯೋಗ ಮಾಡುತ್ತಿದ್ದ ರಾಜು, ತಮಗೆ ಯಾರೂ ನ್ಯಾಯ ಒದಗಿಸುತ್ತಿಲ್ಲ ಎಂದು ಬೇಸಗೊಂಡು ಕೃತ್ಯ ಎಸಗಿದ್ದಾನೆ.

ಜಯನಗರ ಠಾಣೆ ಪೊಲೀಸರು ರಾಜುನನ್ನು ವಶಕ್ಕೆ ಪಡೆದಿದ್ದಾರೆ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment