ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಾನಸ ಟ್ರಸ್ಟ್ ವತಿಯಿಂದ ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ ಅಯೋಜಿಸಲಾಗಿದೆ. ಆ ದಿನ ಇಬ್ಬರು ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಮಾನಸ ಟ್ರಸ್ಟ್ ನಿರ್ದೇಶಕ ಡಾ. ರಾಜೇಂದ್ರ ಚೆನ್ನಿ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ.ರಾಜೇಂದ್ರ ಚೆನ್ನಿ, ಫೆಬ್ರವರಿ 20ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಜಯಂತ್ ಕಾಯ್ಕಿಣಿ ಜೊತೆ ಸಂವಾದ
ಕಟೀಲ್ ಅಶೋಕ್ ಪೈ ಸ್ಮರಣಾರ್ಥ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾಲಯದ ಡಾ.ಹರಿಣಿ ನಾಗೇಂದ್ರ ಅವರು Thinking Ecologically about development in India’s Climate ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಬಳಿಕ ಸಾಹಿತಿ ಜಯಂತ ಕಾಯ್ಕಿಣಿ ಅವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದರು.
ಇಬ್ಬರಿಗೆ ರಾಷ್ಟ್ರೀಯ ಪ್ರಶಸ್ತಿ
ಈ ಬಾರಿ ಇಬ್ಬರಿಗೆ ಮಾನಸ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದೆ. ಮನೋವೈದ್ಯ ಡಾ. ಸ್ವಾಮಿನಾಥ ಗೋಪಾಲರಾವ್ ಮತ್ತು ನಿಮಾನ್ಸ್ನ ಮನೋವೈದ್ಯಕೀಯ ಪ್ರಾಧ್ಯಾಪಕ ಡಾ.ಜಗದೀಶ ತೀರ್ಥಹಳ್ಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತದೆ ಎಂದು ಡಾ.ರಾಜೇಂದ್ರ ಚೆನ್ನಿ ತಿಳಿಸಿದರು.
ಕುವೆಂಪು ವಿವಿ ಮತ್ತು ಶಿವಮೊಗ್ಗದ ವಿವಿಧ ಪದವಿ ಕಾಲೇಜುಗಳ 300 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾನಸ ಟ್ರಸ್ಟ್ನ ನಿರ್ದೇಶಕಿ ಡಾ.ರಜನಿ ಎ.ಪೈ, ಟ್ರಸ್ಟಿ ಡಾ. ಪ್ರೀತಿ ವಿ. ಶಾನ್ಭಾಗ್, ಪ್ರಾಂಶುಪಾಲರಾದ ಸಂಧ್ಯಾ ಕಾವೇರಿ ಅವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]