ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MAY 2023

SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK)‌ ನಿರ್ದೇಶಕ ಸ್ಥಾನದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರನ್ನು ವಜಾಗೊಳಿಸಿದ್ದ ಸಹಕಾರ ಇಲಾಖೆ ಜಂಟಿ ನಿಬಂಧಕರ ಆದೇಶವನ್ನು ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶದಿಂದ ಡಾ. ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನ ಪುನಃ ದಕ್ಕಿದಂತಾಗಿದೆ.

RM Manjunatha Gowda at Shimoga DCC Bank

ನಿರ್ದೇಶಕರ ಸ್ಥಾನ ವಜಾ ಆಗಿದ್ದೇಕೆ?

DCC BANKನ ಮುಖ್ಯ ಶಾಖೆಯಲ್ಲಿ ನಕಲಿ ಬಂಗಾರ ಅಡವಿಟ್ಟು ಬಹುಕೋಟಿ ರೂ. ವಂಚಿಸಲಾಗಿತ್ತು. ಈ ಪ್ರಕರಣದಲ್ಲಿ ಡಾ. ಆರ್‌.ಎಂ.ಮಂಜುನಾಥ ಗೌಡ ಅವರನ್ನು ಜಂಟಿ ಸಹಕಾರ ನಿಬಂಧಕರ ನ್ಯಾಯಾಲಯವು ಬ್ಯಾಂಕ್‌ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿತ್ತು. ಹೈಕೋರ್ಟ್‌ ಸೂಚನೆಯಂತೆ ಮಂಜುನಾಥ ಗೌಡ ಅವರು ಅಪರ ಸಹಕಾರ ನಿಬಂಧಕರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದ ಫಟಾಫಟ್‌ ಸುದ್ದಿಗಳು, ಇವತ್ತು ಎಲ್ಲೆಲ್ಲಿ ಏನೇನಾಯ್ತು? 3 ನಿಮಿಷದಲ್ಲಿ 10 ಸುದ್ದಿಗಳನ್ನು ಓದಿ

ಡಿಸಿಸಿ ಬ್ಯಾಂಕಿಗೆ ಆರ್‌ಎಂಎಂ

ಇತ್ತ ನ್ಯಾಯಾಲಯದ ಆದೇಶ ಪ್ರತಿ ಸಿಗುತ್ತಿದ್ದಂತೆ ಆರ್.ಎಂ.ಮಂಜುನಾಥ ಗೌಡ ಅವರು DCC BANK ಮುಖ್ಯ ಕಚೇರಿಗೆ ಆಗಮಿಸಿದ್ದರು. ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಆದೇಶ ಪ್ರತಿ ನೀಡಿದರು. ಈ ವೇಳೆ ನಿರ್ದೇಶಕರಾದ ಜಿ.ಎನ್.ಸುಧೀರ್‌, ಷಡಾಕ್ಷರಿ, ದುಗ್ಗಪ್ಪ ಗೌಡ, ಪರಮೇಶ್ವರ್‌, ಕೆಎಂಎಫ್‌ ಮಾಜಿ ಅಧ್ಯಕ್ಷ ಜಗದೀಶ್‌, ಜಿಲ್ಲಾ ಕಾಂಗ್ರೆಸ್‌ ಅ‍ಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಇದ್ದರು.

ಮಂಜುನಾಥ ಗೌಡ ಹೇಳಿದ್ದೇನು?

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ. ಆರ್.‌ಎಂ.ಮಂಜುನಾಥ ಗೌಡ, RM Manjunatha Gowda, DCC Bank Shimogaʼರಾಜಕೀಯ ಪಿತೂರಿ ಮಾಡಿ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ್ದರು. ಒಮ್ಮೆ 8 ಸದಸ್ಯರನ್ನು ವಜಾಗೊಳಿಸಿದ್ದರು. ಆಮೇಲೆ ನನ್ನೊಬ್ಬನನ್ನೆ ಅನರ್ಹ ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದೆ. ವಿಚಾರಣೆ ನಡೆಸಿ ಸಹಕಾರ ನಿಬಂಧಕರ ಕಚೇರಿಗೆ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಅಪರ ನಿಬಂಧಕರು ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ ಎಂದರು.

[su_animate type=”bounceInUp”][su_button url=”<a href=”https://chat.whatsapp.com/Gw9Vd0MvljO9kI4k7LDRmj”>https://chat.whatsapp.com/Gw9Vd0MvljO9kI4k7LDRmj</a>” target=”blank” style=”glass” background=”#0003ab” color=”#ffffff” size=”6″ radius=”0″ icon=”<a href=”https://shivamoggalive.com/wp-content/uploads/2022/11/Whatspp-Logo.png”>https://shivamoggalive.com/wp-content/uploads/2022/11/Whatspp-Logo.png</a>”]ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ[/su_button][/su_animate]

ಡಿಸಿಸಿ ಬ್ಯಾಂಕ್‌ಗೆ ರೀ ಎಂಟ್ರಿ

ಆರ್‌.ಎಂ.ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ಗೆ ದೀರ್ಘಾವಧಿ ಅಧ್ಯಕ್ಷರಾಗಿದ್ದರು. 1997ರಲ್ಲಿ ಮೊದಲ ಬಾರಿ ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದರು. ಆಮೇಲೆ 1999 ರಿಂದ 2010ರವರೆಗೆ, 2011 ರಿಂದ 2014ರವರೆಗೆ, 2015ರಲ್ಲಿ ಪುನಃ ಅಧ್ಯಕ್ಷರಾಗಿದ್ದರು. 2020ರ ಜು14ರಂದು ನಿರ್ದೇಶಕ ಸ್ಥಾನ ಅನರ್ಹಗೊಳಿಸಿದ್ದರಿಂದ ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು. ಈ ಹಿನ್ನೆಲೆ ಎಂ.ಬಿ.ಚನ್ನವೀರಪ್ಪ ಅವರು ಅಧ್ಯಕ್ಷರಾಗಿದ್ದಾರೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment