ಮುಳುಗಿತು ಶಿವಮೊಗ್ಗದ ಮಂಟಪ, ತುಂಗಾ ನದಿಯಲ್ಲಿ ಹೆಚ್ಚಿತು ನೀರಿನ ಮಟ್ಟ, ಈಗ ಎಷ್ಟಿದೆ ಹೊರ ಹರಿವು?

ಶಿವಮೊಗ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ತುಂಗಾ ಜಲಾಶಯದ ಒಳ ಹರಿವು ಮತ್ತಷ್ಟು ಏರಿಕೆಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಶಿವಮೊಗ್ಗ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಂಟಪ ಮುಳುಗಡೆ ಆಗಿರುವ ವಿಷಯ ತಿಳಿದು ಜನರು ಹೊಳೆ ಬದಿಗೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ. ಫೋಟೊ, ವಿಡಿಯೋ ತೆಗೆದುಕೊಂಡು ಖುಷಿ ಪಡುತ್ತಿದ್ದಾರೆ. ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿ ಮಂಟಪ ಮುಳುಗಿದ್ದು ಜನರು ಸಂಭ್ರಮಿಸಿದರು.

Korpalaiah-Chatra-Mantapa-Drowned-in-Shimoga-Tunga-River

ತುಂಬಿ ಹರಿಯುತ್ತಿರುವ ತುಂಗೆಗೆ ಜನರು ಪೂಜೆ ಸಲ್ಲಿಸುತ್ತಿದ್ದಾರೆ. ಕುಟುಂಬ ಸಹಿತ ನದಿ ದಂಡೆಗೆ ಆಗಮಿಸಿ ಬಾಗಿನ ಅರ್ಪಿಸುತ್ತಿದ್ದಾರೆ.

ರಾತ್ರಿ ವೇಳೆ ಮತ್ತಷ್ಟು ನೀರು

ಸದ್ಯ ತುಂಗಾ ಜಲಾಶಯದಿಂದ 80 ಸಾವಿರ ಕ್ಯೂಸೆಕ್‌ಗಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹೊಳಗೆ ಹರಿಸಲಾಗುತ್ತಿದೆ. ಆದ್ದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರಾತ್ರಿ ವೇಳೆ ಇನ್ನಷ್ಟು ಪ್ರಮಾಣದ ನೀರು ಹೊಳೆಗೆ ಹರಿಸುವ ಸಾದ್ಯತೆ ಇದೆ.